ಜಿಡಿಪಿ: ಶೇ 7ರಷ್ಟು ಪ್ರಗತಿ ನಿರೀಕ್ಷೆ
2024–25ನೇ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು ಶೇ 7ರಷ್ಟು ಪ್ರಗತಿ ಕಾಣಲಿದೆ ಎಂದು ಆರ್‌ಬಿಐ ತಿಳಿಸಿದೆ. ದೇಶದ ಸ್ಥೂಲ ಆರ್ಥಿಕ ಅಂಶಗಳು ಬಲಗೊಂಡಿವೆ. ಹಾಗಾಗಿ ಭಾರತದ ಆರ್ಥಿಕತೆಯು ಜಾಗತಿಕ ಮಟ್ಟದಲ್ಲಿ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿದೆ ಎಂದು ಹೇಳಿದೆ. ಚಿಲ್ಲರೆ ಹಣದುಬ್ಬರವು ಇಳಿಕೆಯಾಗಲಿದೆ ಎಂದು ವರದಿ ಹೇಳಿದೆ. ಆದರೂ ಪೂರೈಕೆ ಸರಪಳಿಯಲ್ಲಿನ ಕೊರತೆಯಿಂದಾಗಿ ಆಹಾರದ ಹಣದುಬ್ಬರ ಏರಿಕೆಯಾಗಲಿದೆ ಎಂದು ಅಂದಾಜಿಸಿದೆ.