ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಿಲಯನ್ಸ್‌ ಇಂಡಸ್ಟ್ರೀಸ್‌ ಲಾಭ ಶೇ 5.5ರಷ್ಟು ಇಳಿಕೆ

Published 19 ಜುಲೈ 2024, 15:43 IST
Last Updated 19 ಜುಲೈ 2024, 15:43 IST
ಅಕ್ಷರ ಗಾತ್ರ

ನವದೆಹಲಿ: 2024–25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಉದ್ಯಮಿ ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ  ಲಾಭದಲ್ಲಿ ಶೇ 5.5ರಷ್ಟು ಇಳಿಕೆಯಾಗಿದೆ. ಕಂಪನಿಯು ಒಟ್ಟು ₹15,138 ಕೋಟಿ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹16,011 ಕೋಟಿ ಲಾಭ ಗಳಿಸಿತ್ತು. 2023–24ನೇ ಮಾರ್ಚ್‌ ತ್ರೈಮಾಸಿಕದಲ್ಲಿ ₹18,951 ಕೋಟಿ ಲಾಭ ಗಳಿಸಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 20ರಷ್ಟು ಕಡಿಮೆಯಾಗಿದೆ ಎಂದು ಕಂಪನಿಯು ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.

ತೈಲ ಸಂಸ್ಕರಣಾ ಲಾಭದಲ್ಲಿ ಇಳಿಕೆಯಾಗಿದೆ. ವೆಚ್ಚ ಪ್ರಮಾಣದ ಹೆಚ್ಚಳದಿಂದಾಗಿ ಲಾಭವು ಕಡಿಮೆಯಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷ ₹2.10 ಲಕ್ಷ ಕೋಟಿ ವರಮಾನ ಗಳಿಸಿತ್ತು. ಈ ಬಾರಿ ₹2.36 ಲಕ್ಷ ಕೋಟಿ ಆಗಿದೆ.

ರಿಲಯನ್ಸ್‌ ಜಿಯೊ ಲಾಭ ಏರಿಕೆ: ರಿಲಯನ್ಸ್‌ ಜಿಯೊ ಇನ್ಫೋಕಾಮ್ ಜೂನ್‌ ತ್ರೈಮಾಸಿಕದಲ್ಲಿ ₹5,445 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 12ರಷ್ಟು ಹೆಚ್ಚಳವಾಗಿದೆ. ವರಮಾನದಲ್ಲಿ ಶೇ 10ರಷ್ಟು ಹೆಚ್ಚಳವಾಗಿದ್ದು, ₹26,478 ಕೋಟಿ ಆಗಿದೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT