ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್, ವಯಾಕಾಮ್ 18 ಮೀಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿಯ ವಿಲೀನದ ಭಾಗವಾಗಿ ಪರವಾನಗಿಯನ್ನು ಸ್ಟಾರ್ ಇಂಡಿಯಾಗೆ ವರ್ಗಾಯಿಸಲು ಸರ್ಕಾರ ಅನುಮೋದನೆ ನೀಡಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸೆ. 27ರಂದು ನೀಡಿದ ಆದೇಶದಲ್ಲಿ ಪರವಾನಗಿ ಹಸ್ತಾಂತರಕ್ಕೆ ಅನುಮೋದಿಸಿದೆ.

ಆದೇಶದಲ್ಲಿ ‘ಇದು ಭಾರತೀಯ ಸ್ಪರ್ಧಾತ್ಮಕ ಆಯೋಗವು (ಸಿಸಿಐ) ವಿಧಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತದೆ’ ಎಂದು ತಿಳಿಸಲಾಗಿದೆ.

ಕಳೆದ ಫೆಬ್ರುವರಿಯಲ್ಲಿ ವಯಾಕಾಮ್ 18 ಮೀಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿಯು ₹70 ಸಾವಿರ ಕೋಟಿ ಮೊತ್ತದ ಜಂಟಿ ಉದ್ಯಮಕ್ಕೆ ಸಹಿ ಹಾಕಿದ್ದವು. ಅದರ ಅಡಿಯಲ್ಲಿ ವಯಾಕಾಮ್ 18 ಮತ್ತು ಸ್ಟಾರ್ ಇಂಡಿಯಾ ಒಡಂಬಡಿಕೆ ಮಾಡಿಕೊಂಡಿವೆ. ಈ ವಹಿವಾಟಿನ ಭಾಗವಾಗಿ ವಯಾಕಾಮ್ 18ಕ್ಕೆ ಸೇರಿದ ಮಾಧ್ಯಮ ಸಂಸ್ಥೆಗಳನ್ನು ಕೋರ್ಟ್ ಅನುಮೋದಿತ ವ್ಯವಸ್ಥೆ ಮೂಲಕ ಸ್ಟಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ನಲ್ಲಿ ವಿಲೀನಗೊಳಿಸಲಾಗಿದೆ.
.ರಿಲಯನ್ಸ್–ಡಿಸ್ನಿ ವಿಲೀನಕ್ಕೆ ಸಿಐಐ ಒಪ್ಪಿಗೆ.ಡಿಸ್ನಿ+ಹಾಟ್ಸ್ಟಾರ್–ರಿಲಯನ್ಸ್ ಒಗ್ಗೂಡುವುದರ ಬಗ್ಗೆ ಆತಂಕ ಹೊರಹಾಕಿದ ಸಿಸಿಐ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.