ನವದೆಹಲಿ: ದೇಶದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ನಿರ್ಧರಿಸಲಾಗಿದೆ. ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವುದೇ ಇದರ ಮೂಲ ಉದ್ದೇಶವಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯ ಹೇಳಿದೆ.

2030ರ ವೇಳೆಗೆ ದೇಶದಲ್ಲಿ 500 ಗಿಗಾವಾಟ್ನಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯ ಗುರಿ ಹೊಂದಲಾಗಿದೆ. ಆ ಮೂಲಕ ಪಳೆಯುಳಿಕೆ ಇಂಧನ ಬಳಕೆಯ ಪ್ರಮಾಣವನ್ನು ಶೇ 50ರಷ್ಟು ತಗ್ಗಿಸಲು ತೀರ್ಮಾನಿಸಲಾಗಿದೆ. 2024ರಲ್ಲಿ ಈ ವಲಯದಲ್ಲಿನ ಹೂಡಿಕೆಯು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ 83ರಷ್ಟು ಹೆಚ್ಚಲಿದೆ ಎಂದು ಸಚಿವಾಲಯ ತಿಳಿಸಿದೆ.

2070ರ ವೇಳೆಗೆ ರಾಷ್ಟ್ರದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಮುಂದಿನ ಏಳು ವರ್ಷಗಳಲ್ಲಿ ಪಳೆಯುಳಿಕೆಯೇತರ ಇಂಧನ ಬಳಕೆಯನ್ನು ಶೇ 65ರಷ್ಟು ಹೆಚ್ಚಿಸಲು ನಿರ್ಧರಿಸಿದೆ.

ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್ ಅವರು, ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿಯೂ ಇದನ್ನು ಪುನರುಚ್ಚರಿಸಿದ್ದಾರೆ.

‘ಈಗಿರುವ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಸಾಮರ್ಥ್ಯದ ಜೊತೆಗೆ ಮುಂದಿನ ವರ್ಷ ಹೆಚ್ಚುವರಿಯಾಗಿ 25 ಗಿಗಾವಾಟ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಇದಕ್ಕಾಗಿ ₹1.37 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ. ಹಿಂದಿನ ವರ್ಷ 13.5 ಗಿಗಾವಾಟ್ ಉತ್ಪಾದನೆಗೆ ₹74,250 ಕೋಟಿ ಹೂಡಿಕೆಯಾಗಿತ್ತು’ ಎಂದು ಸಚಿವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.