ನವದೆಹಲಿ: ದೇಶದ ಚಿಲ್ಲರೆ ಹಣದುಬ್ಬರವು ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ನವೆಂಬರ್‌ನಲ್ಲಿ ಶೇ 5.55ರಷ್ಟು ಏರಿಕೆಯಾಗಿದೆ. ಜನರ ದೈನಂದಿನ ಬಳಕೆಯ ಅಗತ್ಯ ಆಹಾರ ಪದಾರ್ಥಗಳ ದರವು ಅಲ್ಪಾವಧಿಯಲ್ಲಿ ಏರಿಕೆಯಾಗಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧಾರಿತ ಈ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ 4.87ರಷ್ಟು ಕನಿಷ್ಠ ಮಟ್ಟದಲ್ಲಿ ದಾಖಲಾಗಿತ್ತು. ಆಗಸ್ಟ್‌ನಲ್ಲಿ ಶೇ 6.83ಕ್ಕೆ ಮುಟ್ಟಿದ್ದ ಚಿಲ್ಲರೆ ಹಣದುಬ್ಬರವು ಬಳಿಕ ಇಳಿಕೆಯ ಹಾದಿ ಹಿಡಿದಿದೆ. ಕಳೆದ ಹಣಕಾಸು ವರ್ಷದ ನವೆಂಬರ್‌ನಲ್ಲಿ ಶೇ 5.88ರಷ್ಟಿತ್ತು.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ 4ರಲ್ಲಿ ನಿಯಂತ್ರಿಸಲು ಗಮನ ಹರಿಸುವಂತೆ ಕೇಂದ್ರ ಸರ್ಕಾರವು ಆರ್‌ಬಿಐಗೆ ನಿರ್ದೇಶನ ನೀಡಿದೆ. ಕಳೆದ ವಾರ ನಡೆದ ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿತ್ತು. 2023–24ನೇ ಸಾಲಿನಡಿ ಚಿಲ್ಲರೆ ಹಣದುಬ್ಬರವು ಶೇ 5.4ರಲ್ಲೇ ಸ್ಥಿರವಾಗಿರಲಿದೆ ಎಂದು ಆರ್‌ಬಿಐ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.