ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಏಳು ನಗರಗಳಲ್ಲಿ ಪ್ರಸಕ್ತ ವರ್ಷ ಅಪಾರ್ಟ್‌ಮೆಂಟ್‌ಗಳ ಮಾರಾಟವು ಶೇ 20ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ಆಸ್ತಿ ಸಲಹಾ ಸಂಸ್ಥೆಯಾದ ಜೆಎಲ್‌ಎಲ್ ಇಂಡಿಯಾ ವರದಿ ಹೇಳಿದೆ.

ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಹೈದರಾಬಾದ್, ಬೆಂಗಳೂರು ಹಾಗೂ ಪುಣೆಯಲ್ಲಿ ಅಪಾರ್ಟ್‌ಮೆಂಟ್‌ಗಳಿಗೆ ಬೇಡಿಕೆ ಹೆಚ್ಚಲಿದೆ. ಸುಮಾರು 2.6 ಲಕ್ಷ ಮನೆಗಳು ಮಾರಾಟವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ನಗರಗಳಲ್ಲಿ ಕಳೆದ ವರ್ಷ 2,15,621 ಮನೆಗಳು ಮಾರಾಟವಾಗಿದ್ದವು. ಈ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗೆ 1,96,227 ಮನೆಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,61,575 ಮನೆಗಳು ಮಾರಾಟವಾಗಿದ್ದವು.

ವರದಿಯಲ್ಲಿ ಕಚ್ಚಾ ಮನೆ, ವಿಲ್ಲಾ ಸೇರಿದಂತೆ ನಿರ್ಮಾಣ ಹಂತದ ಮನೆಗಳನ್ನು ಪರಿಗಣಿಸಲಾಗಿಲ್ಲ. ಗೃಹ ಸಾಲದ ಬಡ್ಡಿದರ ಹೆಚ್ಚಳ ಹಾಗೂ ಬೆಲೆ ಏರಿಕೆಯ ನಡುವೆಯೂ ದೇಶೀಯ ಮಾರುಕಟ್ಟೆಯಲ್ಲಿ ಮನೆಗಳ ಖರೀದಿ ವಹಿವಾಟು ಸಕಾರಾತ್ಮಕವಾಗಿಯೇ ಇದೆ. ಖರೀದಿದಾರರ ಉತ್ಸಾಹ ಕಡಿಮೆಯಾಗಿಲ್ಲ ಎಂದು ವರದಿ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.