ಮುಂಬೈ: ಠೇವಣಿ ಹಿಂಪಡೆಯುವಂತೆ ಸೂಚಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ಜೊತೆಗೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗುರುವಾರ ತಿಳಿಸಿವೆ.

ರಾಜ್ಯದ ವಿವಿಧ ಮಂಡಳಿಗಳು ಈ ಎರಡೂ ಬ್ಯಾಂಕ್‌ಗಳಲ್ಲಿ ಇಟ್ಟಿದ್ದ ನಿಶ್ಚಿತ ಠೇವಣಿ ಹಣವನ್ನು ವಂಚಿಸಿವೆ. ಇದಕ್ಕೆ ಪರಿಹಾರ ನೀಡಲು ನಿರಾಕರಿಸುತ್ತಿವೆ. ಹಾಗಾಗಿ, ಈ ಬ್ಯಾಂಕ್‌ಗಳಲ್ಲಿನ ಖಾತೆ ಸ್ಥಗಿತಗೊಳಿಸಿ ನಿಶ್ಚಿತ ಠೇವಣಿ ಮತ್ತಿತರ ಹೂಡಿಕೆ ಹಿಂಪಡೆಯುವಂತೆ ಸರ್ಕಾರವು ನಿಗಮ, ಮಂಡಳಿಗಳು, ಅಧೀನ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ.

ಸರ್ಕಾರದ ಆದೇಶ ಹೊರಡಿಸಿರುವ ಬೆನ್ನಲ್ಲೇ ಎರಡೂ ಬ್ಯಾಂಕ್‌ಗಳು ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದು, ‘ಈ ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಹಾಗಾಗಿ, ಇದರ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ’ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.