ಮುಂಬೈ: ದೇಶದ ಷೇರುಪೇಟೆಗಳಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಐ.ಟಿ, ತೈಲ ಮತ್ತು ಅನಿಲ, ಎಫ್ಎಂಸಿಜಿ ಷೇರುಗಳ ಖರೀದಿ ಹೆಚ್ಚಳದಿಂದಾಗಿ ಸೂಚ್ಯಂಕಗಳು ಏರಿಕೆ ದಾಖಲಿಸಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 626 ಅಂಶ ಏರಿಕೆ ಕಂಡು 81,343ರಲ್ಲಿ ಸ್ಥಿರಗೊಂಡಿತು. ವಹಿವಾಟಿನ ಒಂದು ಹಂತದಲ್ಲಿ 81,522 ಅಂಶ ತಲುಪಿ ಹೊಸ ಎತ್ತರಕ್ಕೇರಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 187 ಅಂಶ ಹೆಚ್ಚಳವಾಗಿ 24,800ರಲ್ಲಿ ವಹಿವಾಟು ಸ್ಥಿರವಾಯಿತು.

‘ದೇಶದ ಪ್ರಮುಖ ಐ.ಟಿ ಕಂಪನಿಗಳ ಜೂನ್ ತ್ರೈಮಾಸಿಕದ ಫಲಿತಾಂಶಗಳು ಹೂಡಿಕೆದಾರರಲ್ಲಿ ಉತ್ಸಾಹ ಹೆಚ್ಚಿಸಿವೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ (ಸಂಶೋಧನಾ ವಿಭಾಗ) ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಷೇರಿನ ಮೌಲ್ಯದಲ್ಲಿ ಶೇ 3.3ರಷ್ಟು ಏರಿಕೆಯಾಗಿದೆ. ಬಜಾಜ್ ಫಿನ್ಸರ್ವ್, ಇನ್ಫೊಸಿಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಟೆಕ್ ಮಹೀಂದ್ರ, ಹಿಂದುಸ್ತಾನ್ ಯೂನಿಲಿವರ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಎಚ್ಸಿಎಲ್ ಟೆಕ್ನಾಲಜೀಸ್ ಕಂಪನಿಗಳು ಹೆಚ್ಚು ಗಳಿಕೆ ಕಂಡಿವೆ.

ಏಷ್ಯನ್ ಪೇಂಟ್ಸ್, ಜೆಎಸ್ಡಬ್ಲ್ಯು ಸ್ಟೀಲ್, ಎನ್ಟಿಪಿಸಿ ಮತ್ತು ಅದಾನಿ ಪೋರ್ಟ್ಸ್ ಷೇರಿನ ಮೌಲ್ಯ ಇಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.