ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಅಧ್ಯಕ್ಷ ಶಕ್ತಿಕಾಂತ ದಾಸ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರದಿಂದ ಹಣಕಾಸು ನೀತಿ ಸಮಿತಿ ಸಭೆ (ಎಂಪಿಸಿ) ಆರಂಭವಾಗಲಿದೆ. ಈ ಬಾರಿಯೂ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರೀಕ್ಷೆಯಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇದು ಕಚ್ಚಾ ತೈಲ ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಇದರಿಂದ ಚಿಲ್ಲರೆ ಹಣದುಬ್ಬರ ಏರಿಕೆಯಾಗುವ ಆತಂಕವಿದ್ದು, ಬಡ್ಡಿದರ ಇಳಿಕೆ ಮಾಡುವ ಸಾಧ್ಯತೆ ಕಡಿಮೆ ಎಂದು ವಿವರಿಸಿದ್ದಾರೆ.

ಇತ್ತೀಚೆಗೆ ಹಣಕಾಸು ನೀತಿ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಹೊಸದಾಗಿ ಮೂವರು ಬಾಹ್ಯ ಸದಸ್ಯರು ನೇಮಕಗೊಂಡಿದ್ದಾರೆ. ಅವರಿಗೆ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಬುಧವಾರದಂದು ಶಕ್ತಿಕಾಂತ ದಾಸ್ ಪ್ರಕಟಿಸಲಿದ್ದಾರೆ.

ಕಳೆದ ವರ್ಷದ ಫೆಬ್ರುವರಿಯಲ್ಲಿ ರೆಪೊ ದರವನ್ನು ಶೇ 6.5ಕ್ಕೆ ಹೆಚ್ಚಿಸಲಾಗಿತ್ತು. ಇಲ್ಲಿಯವರೆಗೂ ಪರಿಷ್ಕರಣೆ ಮಾಡಿಲ್ಲ. ಡಿಸೆಂಬರ್ನಲ್ಲಿ ನಡೆಯಲಿರುವ ಸಭೆಯಲ್ಲಿ ಬಡ್ಡಿದರ ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.

ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ (ಸಿಪಿಐ) ಹಣದುಬ್ಬರವನ್ನು ಶೇ 4ರ ಮಿತಿಯಲ್ಲಿ ಕಾಯ್ದುಕೊಳ್ಳುವುದು ಆರ್ಬಿಐನ ಗುರಿಯಾಗಿದೆ. ಜುಲೈ ಮತ್ತು ಆಗಸ್ಟ್ನಲ್ಲಿ ನಿಗದಿಪಡಿಸಿರುವ ಈ ಮಿತಿಯೊಳಗೆ ಹಣದುಬ್ಬರ ದಾಖಲಾಗಿದೆ.

ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್ ಇತ್ತೀಚೆಗೆ ಬಡ್ಡಿದರದಲ್ಲಿ ಶೇ 0.50ರಷ್ಟು ಕಡಿತಗೊಳಿಸಿದೆ. ಅಲ್ಲದೆ, ಅಭಿವೃದ್ಧಿ ಹೊಂದಿದ ಕೆಲವು ದೇಶದ ಕೇಂದ್ರೀಯ ಬ್ಯಾಂಕ್ಗಳು ಕೂಡ ಬಡ್ಡಿದರ ಇಳಿಕೆ ಮಾಡಿವೆ. ಆದರೆ, ಭಾರತೀಯ ರಿಸರ್ವ್ ಬ್ಯಾಂಕ್, ಫೆಡರಲ್ ರಿಸರ್ವ್ ನೀತಿಯನ್ನು ಅನುಸರಿಸುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

‘ಸರಕು ಮತ್ತು ಸೇವೆಗಳ ವೆಚ್ಚದಲ್ಲಿನ ಬದಲಾವಣೆಯ ಸೂಚಕವಾದ ಕೋರ್ ಹಣದುಬ್ಬರ ಏರಿಕೆಯ ಪಥದಲ್ಲಿದೆ. ಇದರ ಪರಿಣಾಮ ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಚಿಲ್ಲರೆ ಹಣದುಬ್ಬರವು ಶೇ 5ಕ್ಕಿಂತ ಹೆಚ್ಚು ದಾಖಲಾಗುವ ನಿರೀಕ್ಷೆಯಿದೆ. ಹಾಗಾಗಿ, ಎಂಪಿಸಿ ಸಭೆಯು ತನ್ನ ನಿಲುವು ಸಡಿಲಿಸುವ ಸಾಧ್ಯತೆ ತೀರಾ ಕಡಿಮೆ’ ಎಂದು ಬ್ಯಾಂಕ್ ಆಫ್ ಬರೋಡಾದ ಮುಖ್ಯ ಅರ್ಥಶಾಸ್ತ್ರಜ್ಞ ಮದನ್ ಸಬ್ನವಿಸ್ ಹೇಳಿದ್ದಾರೆ.

‘ಈಗಿನ ಸಭೆಯಲ್ಲಿ ರೆಪೊ ದರ ಕಡಿಮೆ ಮಾಡುವುದಿಲ್ಲ. ಆದರೆ, ಡಿಸೆಂಬರ್ ಮತ್ತು ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯುವ ಎಂಪಿಸಿ ಸಭೆಯಲ್ಲಿ ತಲಾ ಶೇ 25ರಷ್ಟು ಬಡ್ಡಿದರ ಕಡಿತಗೊಳಿಸುವ ಸಾಧ್ಯತೆಯಿದೆ’ ಎಂದು ಐಸಿಆರ್ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.