ನವದೆಹಲಿ: ಗುಜರಾತ್ನ ಸನಂದ್ ಘಟಕದಲ್ಲಿ ಏಪ್ರಿಲ್ನಿಂದಲೇ ವಿದ್ಯುತ್ ಚಾಲಿತ ಕಾರುಗಳ ತಯಾರಿಕೆ ಆರಂಭಿಸುವುದಾಗಿ ಟಾಟಾ ಮೋಟರ್ಸ್ ತಿಳಿಸಿದೆ.

ಕಳೆದ ವರ್ಷದ ಜನವರಿಯಲ್ಲಿ ಫೋರ್ಡ್ ಇಂಡಿಯಾ ಕಂಪನಿಯ ಘಟಕವನ್ನು ₹725.7 ಕೋಟಿಗೆ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಿತ್ತು.

ಏಪ್ರಿಲ್ನಿಂದ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸೇರಿದಂತೆ ಇತರೆ ವಾಹನಗಳ ತಯಾರಿಕೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಟಾಟಾ ಮೋಟರ್ಸ್ನ ಪ್ಯಾಸೆಂಜರ್ ವಾಹನದ ವ್ಯವಸ್ಥಾಪಕ ನಿರ್ದೇಶಕ ಶೈಲೇಶ್ ಚಂದ್ರ ತಿಳಿಸಿದ್ದಾರೆ.

ಕಂಪನಿಯು ಈಗಾಗಲೇ ವಾರ್ಷಿಕ 3 ಲಕ್ಷ ವಾಹನಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಇದನ್ನು 4.2 ಲಕ್ಷಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಪ್ರಯಾಣಿಕ ವಾಹನದ ಉದ್ಯಮವು ಶೇ 5ರಷ್ಟು ಪ್ರಗತಿ ಕಾಣುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.