ಮುಂಬೈ: ದೇಶದ ಅತಿದೊಡ್ಡ ಐ.ಟಿ. ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನೌಕರರನ್ನು ಕೆಲಸದಿಂದ ತೆಗೆಯುವ ಪ್ರಸ್ತಾವ ತನ್ನ ಮುಂದಿಲ್ಲ ಎಂದು ಹೇಳಿದೆ.

‘ಕೆಲಸ ಕಳೆದುಕೊಂಡಿರುವ, ನವೋದ್ಯಮಗಳ ನೌಕರರನ್ನು ನೇಮಕ ಮಾಡಿಕೊಳ್ಳುವ ಆಲೋಚನೆ ನಮಗಿದೆ’ ಎಂದು ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕದ್ ಹೇಳಿದ್ದಾರೆ. ಜಗತ್ತಿನ ಹಲವೆಡೆ ತಂತ್ರಜ್ಞಾನ ವಲಯದ ಕಂಪನಿಗಳು ನೌಕರರನ್ನು ಕೆಲಸದಿಂದ ತೆಗೆಯುತ್ತಿರುವ ಹೊತ್ತಿನಲ್ಲಿ ಟಿಸಿಎಸ್ ಹೇಳಿಕೆ ಮಹತ್ವ ಪಡೆದಿದೆ.

ನೌಕರರನ್ನು ಕೆಲಸದಿಂದ ತೆಗೆಯಲಾಗುತ್ತದೆಯೇ ಎಂಬ ಪ್ರಶ್ನೆಗೆ, ‘ನಾವು ಕೆಲಸದಿಂದ ತೆಗೆಯುವುದಿಲ್ಲ. ನಮಗೆ ಪ್ರತಿಭೆಗಳನ್ನು ನಮ್ಮಲ್ಲಿಯೇ ಬೆಳೆಸುವುದರಲ್ಲಿ ನಂಬಿಕೆ ಇದೆ’ ಎಂದು ಲಕ್ಕದ್ ಅವರು ಹೇಳಿದ್ದಾರೆ.

ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನೌಕರರನ್ನು ನೇಮಕ ಮಾಡಿಕೊಂಡ ಕಂಪನಿಗಳು ಈಗ ನೌಕರರನ್ನು ಕೆಲಸದಿಂದ ತೆಗೆಯುತ್ತಿವೆ. ಆದರೆ ‘ಎಚ್ಚರಿಕೆಯಿಂದ ನೇಮಕ ಮಾಡಿಕೊಳ್ಳುವ ಟಿಸಿಎಸ್, ನೌಕರರನ್ನು ಹೆಚ್ಚು ಉತ್ಪಾದಕವಾಗಿ ಇರುವಂತೆ ನೋಡಿಕೊಳ್ಳುವುದು ತನ್ನ ಹೊಣೆ ಎಂದು ಭಾವಿಸುತ್ತದೆ’ ಎಂದು ಅವರು ವಿವರಿಸಿದ್ದಾರೆ.

‘ಅಮೆರಿಕದಲ್ಲಿ ಕೆಲಸ ಕಳೆದು
ಕೊಂಡಿರುವ ಭಾರತ ಮೂಲದವರನ್ನು ನೇಮಕ ಮಾಡಿಕೊಳ್ಳುವ ವಿಚಾರದಲ್ಲಿ ಕಂಪನಿ ಮುಕ್ತವಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.