ನವದೆಹಲಿ: ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರುವಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು ₹25ರಷ್ಟು ಹೆಚ್ಚಿಸಿವೆ.

ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವು ₹1,795ಕ್ಕೆ ಏರಿಕೆ ಆಗಿದೆ. ಉಳಿದಂತೆ ಮುಂಬೈನಲ್ಲಿ ₹1,749, ಚೆನ್ನೈನಲ್ಲಿ ₹1,960.50, ಕೋಲ್ಕತ್ತದಲ್ಲಿ ₹1,911 ರಷ್ಟಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

2023ರ ಡಿಸೆಂಬರ್ 22ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹39.50ರಷ್ಟು ಇಳಿಕೆ ಮಾಡಲಾಗಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್ ದರವು ಯಥಾಸ್ಥಿತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.