ಮುಂಬೈ: ವಾಘ್ ಬಕ್ರಿ ಟೀ ಗ್ರೂಪ್‌ನ ನಿರ್ದೇಶಕ ಪರಾಗ್ ದೇಸಾಯಿ ಅವರು ಮಿದುಳು ರಕ್ತಸ್ರಾವದಿಂದ ಸಾವಿಗೀಡಾಗಿದ್ದಾರೆ.

ಕೆಲವು ದಿನಗಳ ಹಿಂದೆ ಅವರು ಬೀದಿ ನಾಯಿ ದಾಳಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ಅವರ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಅಕ್ಟೋಬರ್ 15ರಂದು ದೇಸಾಯಿ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವ ವೇಳೆ ಅವರು ಕೆಳಗೆ ಬಿದ್ದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಝೈಡಸ್ ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಗಿತ್ತು.

ಚಿಕಿತ್ಸೆ ವೇಳೆ ಮಿದುಳು ರಕ್ತಸ್ರಾವವಾಗಿದ್ದು, ಭಾನುವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪರಾಗ್ ದೇಸಾಯಿ ಅವರ ಸಾವಿಗೆ ಸಂತಾಪ ಸೂಚಿಸಿರುವ ಗುಜರಾತ್ ಕಾಂಗ್ರೆಸ್ ನಾಯಕ ಶಕ್ತಿ ಸಿನ್ ಗೋಹಿಲ್, ನಿಧನದ ಸುದ್ದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಇದು ತುಂಬ ದುಃಖದ ಸುದ್ದಿಯಾಗಿದೆ. ಮೆದುಳು ರಕ್ತಸ್ರಾವದಿಂದ ವಾಘ್ ಬಕ್ರಿ ಟೀ ಗ್ರೂಪ್‌ನ ಮಾಲೀಕ ಮತ್ತು ನಿರ್ದೇಶಕ ಪರಾಗ್ ದೇಸಾಯಿ ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.

1892ರಲ್ಲಿ ನಾರಂದಾಸ್ ದೇಸಾಯಿ ಅವರು ಆರಂಭಿಸಿದ ‘ವಾಘ್ ಬಕ್ರಿ’ ಕಂಪನಿ, ಇಂದು ಸುಮಾರು ಎರಡು ಸಾವಿರ ಕೋಟಿಯಷ್ಟು ವಹಿವಾಟು ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.