ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮಸಗಟು ದರ ಆಧಾರಿತ ಹಣದುಬ್ಬರ 2019ರ ಡಿಸೆಂಬರ್ನಲ್ಲಿ ಶೇ 2.59ಕ್ಕೆ ಏರಿಕೆಯಾಗಿದೆ.

ಸಗಟು ದರ ಸೂಚ್ಯಂಕ (ಡಬ್ಲ್ಯುಪಿಐ) ಆಧರಿಸಿದ ಹಣದುಬ್ಬರುವ ನವೆಂಬರ್ನಲ್ಲಿ ಶೇ 0.58ರಷ್ಟಿತ್ತು. 2018ರ ಡಿಸೆಂಬರ್ನಲ್ಲಿ ಶೇ 3.46ರಷ್ಟಿತ್ತು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿ–ಅಂಶಗಳಿಂದ ತಿಳಿದು ಬಂದಿದೆ.

ಆಹಾರ ಪದಾರ್ಥಗಳ ಹಣದುಬ್ಬರ ಶೇ 11 ರಿಂದ ಶೇ 13.12ಕ್ಕೆ ಏರಿಕೆಯಾಗಿದೆ. ಮುಖ್ಯವಾಗಿ ಈರುಳ್ಳಿ ಶೇ 455, ಆಲೂಗಡ್ಡೆ ಶೇ 44.97ರಷ್ಟು ಏರಿಕೆಯಾಗುವ ಮೂಲಕ ಒಟ್ಟು ತರಕಾರಿ ಬೆಲೆ ಶೇ 69.69ರಷ್ಟು ಹೆಚ್ಚಳವಾಗಿದೆ.

ಗ್ರಾಹಕರ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಡಿಸೆಂಬರ್ನಲ್ಲಿ 6 ವರ್ಷಗಳಲ್ಲಿನ ಗರಿಷ್ಠ ಮಟ್ಟವಾದ ಶೇ 7.35ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.