ನವದೆಹಲಿ: ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಕೇಂದ್ರ ಸರ್ಕಾರವು ಪ್ರತಿ ಟನ್ಗೆ ₹5,700 ರಿಂದ ₹5,200ಕ್ಕೆ ಇಳಿಸಿದೆ.

ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್ಎಇಡಿ) ರೂಪದಲ್ಲಿ ಈ ತೆರಿಗೆ ವಿಧಿಸಲಾಗುತ್ತದೆ. ಆದರೆ ಡೀಸೆಲ್, ಪೆಟ್ರೋಲ್ ಮತ್ತು ವಿಮಾನ ಇಂಧನದ (ಎಟಿಎಫ್) ಮೇಲಿನ ತೆರಿಗೆಯಲ್ಲಿ ಏರಿಕೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಹೊಸ ದರಗಳು ಜೂನ್ 1ರಿಂದ ಜಾರಿಗೆ ಬಂದಿವೆ ಎಂದು ತಿಳಿಸಿದೆ.

ಮೊದಲ ಬಾರಿಗೆ 2022ರ ಜುಲೈ 1ರಿಂದ ಆಕಸ್ಮಿಕ ಲಾಭ ತೆರಿಗೆಗಳನ್ನು ವಿಧಿಸಲು ಸರ್ಕಾರವು ಆರಂಭಿಸಿತು. ಸರಾಸರಿ ತೈಲ ಬೆಲೆಗಳ ಆಧಾರದ ಮೇಲೆ ಪ್ರತಿ ಹದಿನೈದು ದಿನಗಳಿಗೊಮ್ಮೆ ಈ ತೆರಿಗೆ ದರಗಳನ್ನು ಮರು ಪರಿಶೀಲಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.