ಬೆಂಗಳೂರು: ಕೃತಕ ಬುದ್ಧಿಮತ್ತೆಯಂತಹ ಹೊಸ ತಲೆಮಾರಿನ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕೌಶಲ ಹೆಚ್ಚಿಸಲು ಐ.ಟಿ ದೈತ್ಯ ಸಂಸ್ಥೆ ವಿಪ್ರೊ, ರಾಷ್ಟ್ರೀಯ ಸಾಫ್ಟ್ವೇರ್ ಮತ್ತು ಸೇವಾ ಸಂಸ್ಥೆಗಳ ಒಕ್ಕೂಟ (ನಾಸ್ಕಾಂ) ಜತೆ ಒಪ್ಪಂದ ಮಾಡಿಕೊಂಡಿದೆ.

ದೇಶದಲ್ಲಿನ 20 ಎಂಜಿನಿಯರಿಂಗ್ ಕಾಲೇಜ್ಗಳ 10 ಸಾವಿರ ವಿದ್ಯಾರ್ಥಿಗಳ ಕೌಶಲ ವೃದ್ಧಿ ಉದ್ದೇಶದಿಂದ ‘ನಾಸ್ಕಾಂ’ ಮತ್ತು ವಿಪ್ರೊ ಕೈಜೋಡಿಸಿವೆ. ಈ ತರಬೇತಿ ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್ ಕಾಲೇಜ್ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು ನೀಡಲಾಗಿದೆ.

ಉದ್ದಿಮೆ ಮತ್ತು ಅಕಾಡೆಮಿಕ್ ಕೌಶಲದ ಅಂತರ ತಗ್ಗಿಸುವ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಪರಿಣತಿ ಹೆಚ್ಚಿಸಲಾಗುವುದು. ಇದು ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯ (ಸಿಎಸ್ಆರ್) ಕಾರ್ಯಕ್ರಮವಾಗಿದೆ ಎಂದು ವಿಪ್ರೊ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.