ನವದೆಹಲಿ: ಯೆಸ್ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ₹ 311 ಕೋಟಿ ಆಗಿದೆ. ಹಿಂದಿನ ಹಣಕಾಸು ವರ್ಷ ಇದೇ ಅವಧಿಯಲ್ಲಿ ₹ 207 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 50ರಷ್ಟು ಹೆಚ್ಚಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದಲ್ಲಿ ಇಳಿಕೆ ಆಗಿರುವುದು ಹಾಗೂ ವರಮಾನದಲ್ಲಿ ಉತ್ತಮ ಬೆಳವಣಿಗೆಯಿಂದ ಲಾಭವು ಹೆಚ್ಚಾಗಲು ಕಾರಣ ಎಂದು ಬ್ಯಾಂಕ್ ತಿಳಿಸಿದೆ.

ಬ್ಯಾಂಕ್‌ನ ಒಟ್ಟು ವರಮಾನ ₹ 5,394 ಕೋಟಿಯಿಂದ ₹ 5,916 ಕೋಟಿಗೆ ಏರಿಕೆ ಆಗಿದೆ. ವಸೂಲಾಗದ ಸಾಲದ ಸರಾಸರಿ (ಎನ್‌ಪಿಎ) ಪ್ರಮಾಣವು ಶೇ 15.60 ರಷ್ಟು ಇದ್ದಿದ್ದು ಶೇ 13.45ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್‌ಪಿಎ ಶೇ 5.78 ರಿಂದ ಶೇ 4.17ಕ್ಕೆ ಇಳಿಕೆ ಕಂಡಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹ 457 ಕೋಟಿಯಿಂದ ₹ 175 ಕೋಟಿಗೆ ಇಳಿಕೆ ಆಗಿದೆ ಎಂದು ಬ್ಯಾಂಕ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.