ನವದೆಹಲಿ: ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ನ (ಜೆಡ್ಇಇಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಪುನಿತ್ ಗೋಯೆಂಕಾ ಅವರನ್ನು 5 ವರ್ಷದ ಅವಧಿಗೆ ಕಂಪನಿಯು ಮರು ನೇಮಕ ಮಾಡಿದೆ.

ಈ ನೇಮಕವು ಮುಂದಿನ ವರ್ಷದ ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಕಂಪನಿಯು ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.

ಗೋಯೆಂಕಾ ಅವರು ಸೆಬಿ ಅಥವಾ ಯಾವುದೇ ಪ್ರಾಧಿಕಾರದಿಂದ ಡಿಬಾರ್ ಆಗಿಲ್ಲ ಎಂದು ತಿಳಿಸಿದೆ.

2023ರ ಜೂನ್ನಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಪುನಿತ್ ಗೋಯೆಂಕಾ ಮತ್ತು ಅವರ ತಂದೆ, ಝೀ ಎಸ್ಸೆಲ್ ಸಮೂಹದ ಅಧ್ಯಕ್ಷ ಸುಭಾಷ್ ಚಂದ್ರ ಅವರು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಕಂಪನಿಯ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ ಎಂಬ ಆರೋಪದ ಮೇರೆಗೆ ಡಿಬಾರ್ ಮಾಡಿತ್ತು.

ಈ ಆದೇಶವನ್ನು ಷೇರುಪೇಟೆ ಮೇಲ್ಮನವಿ ನ್ಯಾಯಮಂಡಳಿಯು (ಎಸ್ಎಟಿ) ಅಕ್ಟೋಬರ್ 30ರಂದು ರದ್ದುಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.