ನವದೆಹಲಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಮಂಗಳವಾರದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 17 ಪೈಸೆ ಏರಿಕೆಯಾಗಿದೆ. ವಹಿವಾಟಿನ ಅಂತ್ಯಕ್ಕೆ ₹83.92ಕ್ಕೆ ತಲುಪಿದೆ.

ಗುರುವಾರ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಪ್ರಕಟವಾಗಲಿದೆ. ಇದರಿಂದ ರೂಪಾಯಿ ಮೌಲ್ಯವು ಏರಿಕೆ ಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಅಮೆರಿಕದಲ್ಲಿ ಆರ್ಥಿಕ ಹಿಂಜರಿತದ ಭೀತಿ ಮತ್ತು ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ ಕಂಡಿದ್ದವು. ಡಾಲರ್ ಎದುರು ರೂಪಾಯಿ ಮೌಲ್ಯ 37 ಪೈಸೆ ಕುಸಿದಿತ್ತು.

ಸರ್ಕಾರ ವಿಫಲ: ‘ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ರೂಪಾಯಿ ಮೌಲ್ಯವು ಶೇ 30ರಷ್ಟು ಕುಸಿದಿದೆ. ಸೋಮವಾರದಂದು ಸಾರ್ವಕಾಲಿಕ ಕನಿಷ್ಠಕ್ಕೆ ತಲುಪಿತ್ತು. ಇದು ಕೇಂದ್ರ ಸರ್ಕಾರದ ಆರ್ಥಿಕ ಪ್ರಮಾದ ಮತ್ತು ನಿರ್ವಹಣೆಯಲ್ಲಿನ ವೈಫಲ್ಯವನ್ನು ಸೂಚಿಸುತ್ತದೆ’ ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ ಪವನ್ ಖೇರಾ ‘ಎಕ್ಸ್’ನಲ್ಲಿ ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.