ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಷೇರುಪೇಟೆ: ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ

Published 4 ಜುಲೈ 2024, 5:09 IST
Last Updated 4 ಜುಲೈ 2024, 5:09 IST
ಅಕ್ಷರ ಗಾತ್ರ

ನವದೆಹಲಿ: ಬ್ಲೂ-ಚಿಪ್ ಸ್ಟಾಕ್‌ಗಳ ಖರೀದಿಗೆ ಆಸಕ್ತಿ ಮತ್ತು ದೃಢವಾದ ಎಫ್‌ಐಐ ಒಳಹರಿವು ಸೇರಿದಂತೆ ಜಾಗತಿಕ ಷೇರುಪೇಟೆಗಳಲ್ಲಿ ಧನಾತ್ಮಕ ಚಟುವಟಿಕೆ ಹಿನ್ನೆಲೆಯಲ್ಲಿ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರದ ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಏರಿಕ ದಾಖಲಿಸಿವೆ.

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 388.84 ಅಂಶಗಳಷ್ಟು ಏರಿಕೆ ಕಂಡು 80,375.64ರಲ್ಲಿ ವಹಿವಾಟು ಆರಂಭಿಸಿದರೆ, ನಿಫ್ಟಿ 114.45 ಅಂಶಗಳಷ್ಟು ಜಿಗಿದು ಸಾರ್ವಕಾಲಿಕ ಗರಿಷ್ಠ ಮಟ್ಟ 24,400.95 ಅಂಶಗಳಲ್ಲಿ ವಹಿವಾಟು ಆರಂಭಿಸಿದೆ.

ಸೆನ್ಸೆಕ್ಸ್‌ನಲ್ಲಿ, ಟಾಟಾ ಮೋಟಾರ್ಸ್, ಐಸಿಐಸಿಐ ಬ್ಯಾಂಕ್, ಮಹೀಂದ್ರ ಅಂಡ್ ಮಹೀಂದ್ರ, ಇನ್ಫೋಸಿಸ್, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅತಿ ಹೆಚ್ಚು ಲಾಭ ಗಳಿಸಿವೆ.

ಎಚ್‌ಡಿಎಫ್‌ಸಿ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಅದಾನಿ ಪೋರ್ಟ್ಸ್, ಸ್ಪೆಷಲ್ ಎಕನಾಮಿಕ್ ಜೋನ್, ಮತ್ತು ಭಾರ್ತಿ ಏರ್‌ಟೆಲ್ ನಷ್ಟ ಅನುಭವಿಸಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಬುಧವಾರ 5,483.63 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂದು ವಿನಿಮಯ ಕೇಂದ್ರದ ಮಾಹಿತಿಯಿಂದ ತಿಳಿದುಬಂದಿದೆ.

ಏಷ್ಯಾ ಷೇರುಪೇಟೆಗಳ ಪೈಕಿ ಟೋಕಿಯೊ, ಸೋಲ್ ಏರುಗತಿಯಲ್ಲಿದ್ದರೆ, ಶಾಂಘೈ ಮತ್ತು ಹಾಂಕಾಂಗ್ ಷೇರುಪೇಟೆಗಳಲ್ಲಿ ಕುಸಿತ ಕಂಡುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT