ನವದೆಹಲಿ: ಷೇರುಪೇಟೆ ವಹಿವಾಟನ್ನುಮೊಬೈಲ್ ಮೂಲಕ ನಡೆಸುವುದು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ‘ಸಾರಥಿ’ (Saa₹thi) ಎನ್ನುವ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಸೆಬಿ ಅಧ್ಯಕ್ಷ ಅಜಯ್ ತ್ಯಾಗಿ ಅವರು ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದರು. ಸೆಕ್ಯುರಿಟಿ ಮಾರುಕಟ್ಟೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಹೂಡಿಕೆದಾರರನ್ನು ಸಬಲಗೊಳಿಸುವ ಉದ್ದೇಶದಿಂದ ಈ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದರು.

ಮಾರುಕಟ್ಟೆಯಲ್ಲಿ ವೈಯಕ್ತಿಕಹೂಡಿಕೆದಾರರ ಭಾಗವಹಿಸುವಿಕೆಯು ಈಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ, ಹೆಚ್ಚಿನ ಪ್ರಮಾಣದ ವಹಿವಾಟು ಮೊಬೈಲ್ ಮೂಲಕವೇ ನಡೆಯುತ್ತಿದೆ. ಹೀಗಾಗಿ ಅಗತ್ಯ ಮಾಹಿತಿಗಳನ್ನು ಪಡೆಯಲು ಈ ಆ್ಯಪ್ ಹೆಚ್ಚು ಉಪಯುಕ್ತವಾಗಲಿದೆ ಎಂದು ಅವರು ತಿಳಿಸಿದರು.

ಕೆವೈಸಿ ಪ್ರಕ್ರಿಯೆ, ವಹಿವಾಟು ಮತ್ತು ಇತ್ಯರ್ಥ, ಮ್ಯೂಚುವಲ್ ಫಂಡ್, ಈಚಿನ ಮಾರುಕಟ್ಟೆ ಬೆಳವಣಿಗೆಗಳು, ಹೂಡಿಕೆದಾರರ ಸಮಸ್ಯೆ ಇತ್ಯರ್ಥಪಡಿಸುವ ವ್ಯವಸ್ಥೆ ಸೇರಿದಂತೆ ಹಲವು ಅಂಶಗಳ ಬಗ್ಗೆ ಈ ಆ್ಯಪ್ ಅರಿವು ಮೂಡಿಸಲಿದೆ.

ಈಗ ಈ ಆ್ಯಪ್, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಲಭ್ಯವಿದೆ. ಮುಂಬರುವ ದಿನಗಳಲ್ಲಿ ಕೆಲವು ಪ್ರಾದೇಶಿಕ ಭಾಷೆಗಳಲ್ಲಿಯೂ ಈ ಆ್ಯಪ್ ಲಭ್ಯವಾಗಲಿದೆ ಎಂದು ತ್ಯಾಗಿ ತಿಳಿಸಿದ್ದಾರೆ. ಆ್ಯಂಡ್ರಾಯ್ಡ್ ಮತ್ತು ಐಒಎಸ್‌ನಲ್ಲಿ ಇದು ಲಭ್ಯವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.