ಮುಂಬೈ: ಐಸಿಐಸಿಐ ಬ್ಯಾಂಕ್ ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ ಷೇರುಗಳ ಖರೀದಿ ಹೆಚ್ಚಳದಿಂದಾಗಿ ಷೇರು ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆಯಾಗಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್ಇ) ಸೆನ್ಸೆಕ್ಸ್ 602 ಅಂಶ ಏರಿಕೆಯಾಗಿ, 80,005ಕ್ಕೆ ಸ್ಥಿರಗೊಂಡಿತು. ವಹಿವಾಟಿನ ವೇಳೆ 1,137 ಅಂಶ ಹೆಚ್ಚಳವಾಗಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್ಇ) ನಿಫ್ಟಿ 158 ಅಂಶ ಹೆಚ್ಚಳವಾಗಿ 24,339ಕ್ಕೆ ಸ್ಥಿರಗೊಂಡಿತು.

ಕಚ್ಚಾ ತೈಲದ ಬೆಲೆ ಇಳಿಕೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ಸಹ ದೇಶದ ಷೇರು ಸೂಚ್ಯಂಕಗಳ ಏರಿಕೆಗೆ ಸಹಕಾರಿಯಾದವು.

ಐಸಿಐಸಿಐ ಬ್ಯಾಂಕ್, ಜೆಎಸ್ಡಬ್ಲ್ಯು ಸ್ಟೀಲ್, ಮಹೀಂದ್ರ ಆ್ಯಂಡ್ ಮಹೀಂದ್ರ, ಅದಾನಿ ಪೋರ್ಟ್ಸ್, ಟಾಟಾ ಸ್ಟೀಲ್, ಸನ್ ಫಾರ್ಮಾ, ಹಿಂದುಸ್ತಾನ್ ಯೂನಿಲಿವರ್, ಟಾಟಾ ಮೋಟರ್ಸ್ ಮತ್ತು ಎಸ್ಬಿಐ ಷೇರಿನ ಮೌಲ್ಯ ಏರಿಕೆಯಾಗಿದೆ.

ಎಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಟೆಕ್ ಮಹೀಂದ್ರ, ಎಚ್ಡಿಎಫ್ಸಿ ಬ್ಯಾಂಕ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಏಷ್ಯನ್ ಮಾರುಕಟ್ಟೆಯಲ್ಲಿ ಸೋಲ್, ಟೋಕಿಯೊ, ಶಾಂಘೈ ಮತ್ತು ಹಾಂಗ್ಕಾಂಗ್ ಸಕಾರಾತ್ಮಕ ವಹಿವಾಟು ನಡೆಸಿವೆ.

ದೇಶೀಯ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರದ ವಹಿವಾಟಿನಲ್ಲಿ ₹4,159 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ. ಜಾಗತಿಕ ಮಾರುಕಟ್ಟೆ ಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇ 5.84ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ಗೆ 71.54 ಡಾಲರ್ಗೆ (₹6,014) ಕುಸಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.