ಮೈಸೂರು: ‘ಚಿಣ್ಣರ ಪ್ರತಿಭೆ ಅನಾವರಣಕ್ಕೆ ಮಕ್ಕಳ ದಸರಾ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.

ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ವಸ್ತುಪ್ರದರ್ಶನದಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.

‘ಮಕ್ಕಳ ದಸರಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಮಕ್ಕಳು ಧರ್ಮ, ಜಾತಿ ಮೀರಿದ ನಿರ್ಮಲ ಮನಸ್ಸುಳ್ಳವರು. ಅವರಲ್ಲಿ ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸಲು ಪೋಷಕರು ನೆರವಾಗಬೇಕು. ಶಿಕ್ಷಕರು ಕೂಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅವರು ಪ್ರಬುದ್ಧ ನಾಗರಿಕರಾಗಿ ಜೀವಿಸಲು ಅತ್ಯುತ್ತಮ ಮಾರ್ಗದರ್ಶನ ನೀಡಬೇಕು’ ಎಂದರು.

‘ಮಕ್ಕಳ ಬಗ್ಗೆ ಮುತುವರ್ಜಿ ವಹಿಸಿ ಬಾಲ್ಯದಲ್ಲಿ ಗುಣಾತ್ಮಕ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ನಡವಳಿಕೆಗಳನ್ನೂ ಕಲಿಸಬೇಕು. ನಮ್ಮ ದೇಶದ ಸಂವಿಧಾನದ ಆಶಯದಂತೆ ಮಕ್ಕಳು ಉತ್ತಮ ಪ್ರಜೆಗಳಾಗಬೇಕು’ ಎಂದು ಆಶಿಸಿದರು.

ಬಾಲಕ ಅಗಸ್ತ್ಯ ಮಾತನಾಡಿ, ‘ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆ ಇದಾಗಿದೆ. ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳಿಗೆ ಅಗತ್ಯವಾಗಿದೆ. ಮಕ್ಕಳು ಇಂತಹ ವೇದಿಕೆ ಬಳಸಿಕೊಂಡು ಪ್ರತಿಭೆ ಪ್ರದರ್ಶಿಸಬೇಕು’ ಎಂದರು.

ಕಲಾಮಂದಿರ ಆವರಣದಲ್ಲಿನ ಶೈಕ್ಷಣಿಕ ವಸ್ತುಪ್ರದರ್ಶನವನ್ನು ಸಚಿವರು ವೀಕ್ಷಿಸಿದರು.

ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಪ್ರಾದೇಶಿಕ ಆಯುಕ್ತ ರಮೇಶ್, ಡಿಡಿಪಿಐ ಎಸ್.ಟಿ. ಜವರೇಗೌಡ, ಶಿಕ್ಷಣಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.