ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ದೊರಕಲು ಕ್ಷಣಗಣನೆ ಶುರುವಾಗಿದ್ದು, ಗುರುವಾರ ಬೆಳಿಗ್ಗೆ ದಟ್ಟ ಮಂಜು ಮುಸುಕಿದ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಗರಿಗೆದರಿದೆ.

ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಉತ್ಸವ ಶುರುವಾಗಲಿದ್ದು, ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಪ್ರದಕ್ಷಿಣೆ ತರುವ ವೇಳೆ, ನೆರೆದಿದ್ದ ಗ್ರಾಮಸ್ಥರು, ಪೊಲೀಸ್ ಸಿಬ್ಬಂದಿ ಕೈಮುಗಿದು ನಮಸ್ಕರಿಸಿದರು. ದೇವಿಯ ಫೋಟೋ ತೆಗೆದುಕೊಂಡರು.

ಪ್ರೊ.ಹಂಪಾನಾ ಉತ್ಸವಕ್ಕೆ ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

ಬೆಟ್ಟದ ದಾರಿಯುದ್ದಕ್ಕೂ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಿದ್ದು, ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
.Video: ಮೈಸೂರು ದಸರಾ ಉದ್ಘಾಟನೆ ಸಮಾರಂಭದ ನೇರ ಪ್ರಸಾರ... ಇಲ್ಲಿ ವೀಕ್ಷಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.