ಬಾದಾಮಿ (ಬಾಗಲಕೋಟೆ ಜಿಲ್ಲೆ): ಪಟ್ಟಣದ ಹೊರವಲಯದ ತೋಟವೊಂದರಲ್ಲಿ 15ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳದಲ್ಲಿ ಒಟ್ಟು ₹ 3.65 ಲಕ್ಷ ಮೌಲ್ಯದ 724 ಕೆ.ಜಿ ತೂಕದ ಗೋಮಾಂಸ ವಶಪಡಿಸಿಕೊಂಡಿದ್ದಾರೆ.

‘ಇನ್ನೂ ಕೆಲ ಆರೋಪಿಗಳಿಗಾಗಿ ಶೋಧ ನಡೆದಿದ್ದು, ಅವರನ್ನೂ ಬಂಧಿಸಲಾಗುವುದು’ ಎಂದು ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಪ್ರಸನ್ನಕುಮಾರ ದೇಸಾಯಿ ತಿಳಿಸಿದ್ದಾರೆ.

ಗೋಹತ್ಯೆ ಖಂಡಿಸಿ ಮತ್ತು ಕಾರಣಕರ್ತರಾದವರನ್ನು ಬಂಧಿಸುವಂತೆ ಆಗ್ರಹಿಸಿ ಶ್ರೀರಾಮಸೇನೆ, ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕಾರ್ಯಕರ್ತರು ಎರಡನೇ ದಿನವೂ ಪ್ರತಿಭಟನೆ ನಡೆಸಿದರು. ಹಾಗಾಗಿ ಶುಕ್ರವಾರ ಮಾರುಕಟ್ಟೆ ಸಂಪೂರ್ಣ ಬಂದ್ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.