ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಬಕವಿ ಬನಹಟ್ಟಿ: ಕೃಷ್ಣಾ ನದಿಯಲ್ಲಿ ಬೋಟ್ ಸೇವೆ ಆರಂಭ

Published 25 ಜೂನ್ 2024, 15:29 IST
Last Updated 25 ಜೂನ್ 2024, 15:29 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದಾಗಿ ಸಮೀಪದ ಅಥಣಿ ತಾಲ್ಲೂಕಿನ ಮಹೀಷವಾಡಗಿ ಸೇತುವೆ ನೀರಿನಲ್ಲಿ ಮುಳುಗಿರುವುದರಿಂದ ನದಿಯಲ್ಲಿ ಈಗ ಬೋಟ್ ಸೇವೆ ಆರಂಭಗೊಂಡಿದೆ.

ರಬಕವಿ ಬನಹಟ್ಟಿ ತಾಲ್ಲೂಕಿನ ವಿವಿಧ ನಗರ ಮತ್ತು ಗ್ರಾಮೀಣ ಪ್ರದೇಶಗಳಿಂದ ಅಥಣಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಇದು ಬಹಳಷ್ಟು ಅನುಕೂಲವಾಗಿದೆ. ನಿತ್ಯ ಎರಡು ತಾಲ್ಲೂಕುಗಳ ಸಾವಿರಾರು ಜನರು ಬೋಟ್ ಮೂಲಕ ಪ್ರಯಾಣ ಮಾಡುತ್ತಿದ್ದಾರೆ.

ಅಸುರಕ್ಷತೆಯ ಪ್ರಯಾಣ: ನದಿಯ ಮೂಲಕ ಪ್ರಯಾಣ ಮಾಡುವವರಿಗೆ ಯಾವುದೆ ಸುರಕ್ಷತೆ ಇಲ್ಲ. ಇಲ್ಲಿಯ ಪ್ರಯಾಣಿಕರಿಗೆ ಜೀವ ರಕ್ಷಕ ಕವಚಗಳ ಸೌಲಭ್ಯ ಕೂಡ ಇಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ನೀಡಿ ಜೀವ ರಕ್ಷಕ ಕವಚಗಳನ್ನು ವಿತರಣೆ ಮಾಡುವಂತೆ ಕ್ರಮ ತೆಗೆದುಕೊಳ್ಳಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT