ಮಹಾಲಿಂಗಪುರ (ಬಾಗಲಕೋಟೆ): ರನ್ನಬೆಳಗಲಿ ಪಟ್ಟಣ ವ್ಯಾಪ್ತಿಯಲ್ಲಿ ಈಚೆಗೆ ನಡೆದ ಇಬ್ಬರ ಸಜೀವ ದಹನ ಪ್ರಕರಣದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ತಾಯಿ ಜೈಬಾನು ಮತ್ತು ಪುತ್ರಿ ಶಬಾನಾ ಸ್ಥಳದಲ್ಲೇ ಮೃತಪಟ್ಟಿದ್ದರು. ಜೈಬಾನು ಅವರ ಪುತ್ರ ಸುಬಾನ ಪೆಂಡಾರಿ (27) ಗುರುವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

‘ಶೇ 75ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿದ್ದ ಸುಬಾನ ಅವರಿಗೆ ವಿವಿಧೆಡೆ ಚಿಕಿತ್ಸೆ ಕೊಡಿಸಲಾಗಿತ್ತು. ಬೆಳಗಾವಿಯಲ್ಲೇ ಮರಣೋತ್ತರ ಪರೀಕ್ಷೆ ನೆರವೇರಿಸಿ, ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು. ಜೈಬಾನು ಅವರ ಪತಿ ದಸ್ತಗೀರಸಾಬ ಪೆಂಡಾರಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಪ್ರಕರಣದ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.