ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ: ವಿವಿಧ ಗ್ರಾಮ ಪಂಚಾಯಿತಿ, ತಾಲ್ಲೂಕು ಆಸ್ಪತ್ರೆಗಳಿಗೆ ಜಿ.ಪಂ ಸಿಇಒ ಭೇಟಿ

Published 16 ಜುಲೈ 2024, 13:24 IST
Last Updated 16 ಜುಲೈ 2024, 13:24 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ ಗುಳೇದಗುಡ್ಡ ಮತ್ತು ಬಾದಾಮಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ವಿವಿಧ ಕಾಮಗಾರಿ, ಶಾಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು.

ಗುಳೇದಗುಡ್ಡ ತಾಲ್ಲೂಕಿನ ಹಂಗರಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಂಜೀವಿನಿ ಶೆಡ್‌, ನಂತರ ಕೋಟೆಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಶೆಡ್, ಗ್ರಂಥಾಲಯ, ಭಾರತ ನಿರ್ಮಾಣ ರಾಜೀವ್ ಗಾಂಧಿ ಸೇವಾ ಕೇಂದ್ರ, ಕೂಸಿನ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ಹಾನಾಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕರ ವಸೂಲಿ, ಇ-ಹಾಜರಾತಿ ಪುಸ್ತಕ ಪರಿಶೀಲಿಸಿದರು. ಶಾಲೆಗೆ ಭೇಟಿ ನೀಡಿ ಆಟದ ಮೈದಾನ, ಶೌಚಾಲಯ ವೀಕ್ಷಿಸಿ ಹಾನಾಪುರ ಎಸ್.ಪಿ. ತಾಂಡಾದ ಪ್ರೌಢಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಗ್ರಾಮ ಪಂಚಾಯಿತಿ ನಂದಿಕೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ನೀಡುವ ಚಿಕಿತ್ಸೆ, ಔಷಧ ವಿತರಣೆ ಬಗ್ಗೆ ಹಾಗೂ ಸಂಜೀವಿನಿ ಶೆಡ್ ಪರಿಶೀಲಿಸಿದರು. ನಂತರ ಮಂಗಳೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ ಶಾಲಾ ಕಾಂಪೌಂಡ್ ಪರಿಶೀಲಿಸಿದರು. ಹೊಸೂರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಕುರೇರ ಅವರು, ಕೂಲಿ ಕಾರ್ಮಿಕರಿಗೆ ನೀಡುವ ಕೆಲಸದ ಪ್ರಮಾಣ, ಅವಧಿ, ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು.

ಬೇಲೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕರ ವಸೂಲಿ, ಇ-ಹಾಜರಾತಿ ಪರಿಶೀಲಿಸಿ, ಬಾದಾಮಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಹಾಜರಾತಿ, ರೋಗಿಗಳ ನೋಂದಣಿ ಹಾಗೂ ಔಷಧ ದಾಸ್ತಾನು ಪರಿಶೀಲಿಸಿದರು. 

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಬಡಿಗೇರ, ಸಹಾಯಕ ನಿರ್ದೇಶಕ ಸತೀಶ ಮಾಗೊಂಡ, ರಾಮಚಂದ್ರ ಮೈತ್ರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT