ಬಾಗಲಕೋಟೆ: ‘ಮೊದಲು ನಕ್ಸಲ್, ಭಯೋತ್ಪಾದನಾ ಚಟುವಟಿಕೆಗಳು ನಡೆಯುತ್ತಿದ್ದವು. ಅಂತಹವರನ್ನೆಲ್ಲ ಬಗ್ಗು ಬಡಿಯಲಾಗಿದ್ದು, ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶ ಸುರಕ್ಷಿತವಾಗಿದೆ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಅಲ್ಲಿಯೂ ಚುನಾವಣೆ ನಡೆಯುತ್ತಿದೆ. ಮೂಲ ಸೌಲಭ್ಯ ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಅದರ ಆಧಾರದ ಮೇಲೆಯೇ ಮತ ಕೇಳುತ್ತಿದ್ದೇವೆ’ ಎಂದರು.

ರಾಜ್ಯ ಸರ್ಕಾರ ಬಿಜೆಪಿ ಜಾರಿಗೊಳಿಸಿದ್ದ ಹಲವಾರು ಜನಪರ ಯೋಜನೆಗಳಿಗೆ ಅನುದಾನ ನಿಲ್ಲಿಸಿದೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ವರ್ಗಕ್ಕೆ ಮೀಸಲಾಗಿದ್ದ ಅನುದಾನವನ್ನು ಡೈವರ್ಟ್ ಮಾಡಲಾಗಿದೆ. ದುಡಿಯುವ ಬಂಡವಾಳ ಕಡಿಮೆಯಾಗಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಅಶಾಂತಿ, ಅಭದ್ರತೆಯ ವಾತಾವರಣ ನಿರ್ಮಾಣವಾಗಿದೆ. ರಾಮೇಶ್ವರ ಕೆಫೆ ಬಾಂಬ್ ಸ್ಫೋಟ, ಜೈಶ್ರೀರಾಮ ಎನ್ನುವವರ ಮೇಲೆ ಹಲ್ಲೆ, ಯಾದಗಿರಿ ಕೊಲೆ ಪ್ರಕರಣ ಉದಾಹರಣೆಗಳಾಗಿವೆ. ಒಂದೆಡೆ ಪ್ರಧಾನಿ ಅಭ್ಯರ್ಥಿಯಿಲ್ಲದ ವಿರೋಧ ಪಕ್ಷ, ಇನ್ನೊಂದೆಡೆ ಯಶಸ್ವಿ ಪ್ರಧಾನಿ ಇದ್ದಾರೆ. ಗದ್ದಿಗೌಡರ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಮುಖಂಡರಾದ ಬಸವರಾಜ ಯಂಕಂಚಿ, ರಾಜು ನಾಯ್ಕರ, ಸತ್ಯನಾರಾಯಣ ಹೇಮಾದ್ರಿ, ಅಶೋಕ ಲಿಂಬಾವಳಿ, ಶಿವಾನಂದ ಸುರಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.