ಬಾಗಲಕೋಟೆ: ಜಿಲ್ಲೆಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಒಂದೇ ದಿನದಲ್ಲಿ ₹2.12 ಕೋಟಿ ಕರ ಸಂಗ್ರಹವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

ತಾಲ್ಲೂಕಿನ ಮಲ್ಲಾಪುರ, ಭಗವತಿ ಹಾಗೂ ಬೇವಿನಮಟ್ಟಿ ಗ್ರಾಮಗಳಲ್ಲಿ ಕರ ವಸೂಲಾತಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ತೆರಿಗೆ ವಸೂಲಾತಿಗಾಗಿ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪಂಚಾಯಿತಿ ಸಿಬ್ಬಂದಿ ವಸೂಲಿ ಕಾರ್ಯ ಆರಂಭಿಸಿದ್ದಾರೆ ಎಂದರು.

ಬೀಳಗಿ ತಾಲ್ಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ₹41.99 ಲಕ್ಷ, ಬಾಗಲಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ₹41.74 ಲಕ್ಷ, ಮುಧೋಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ₹30.01 ಲಕ್ಷ, ಬಾದಾಮಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ₹27.34 ಲಕ್ಷ ಸಂಗ್ರಹಿಸಲಾಗಿದೆ.

ಮುಧೋಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ₹17.85, ರಬಕವಿ-ಬನಹಟ್ಟಿ ತಾಲ್ಲೂಕು ವ್ಯಾಪ್ತಿಯಲ್ಲಿ ₹17.30 ಲಕ್ಷ, ಇಳಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ₹13.37 ಲಕ್ಷ, ಗುಳೇದಗುಡ್ಡ ತಾಲ್ಲೂಕು ವ್ಯಾಪ್ತಿಯಲ್ಲಿ ₹11.40 ಲಕ್ಷ ಹಾಗೂ ಜಮಖಂಡಿ ತಾಲ್ಲೂಕು ವ್ಯಾಪ್ತಿಯಲ್ಲಿ ₹11.94 ಲಕ್ಷ ಸಂಗ್ರಹವಾಗಿದೆ.

ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ತೆರಿಗೆ ಪಾವತಿಸಿ ಗ್ರಾಮಗಳ ಅಭಿವೃದ್ದಿಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ಪಂಚಾಯತ ರಾಜ್ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರ ಚಲವಾದಿ ಉಪಸ್ಥಿತರಿದ್ದರು.

ಬೆಳಿಗ್ಗೆ 7ರಿಂದ ಸಂಜೆ 6ಗಂಟೆವರೆಗೆ ಕರ ವಸೂಲಾತಿ ಅಭಿಯಾನಕ್ಕೆ ಜನರಿಂದ ವ್ಯಕ್ತವಾದ ಉತ್ತಮ ಸ್ಪಂದನೆ ಗ್ರಾ.ಪಂ ಸಿಬ್ಬಂದಿಯಿಂದ ವಸೂಲಿ ಕಾರ್ಯ ಆರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.