ಜಮಖಂಡಿ: ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆಯಿತು. ಬಿಜೆಪಿ ಮುಖಂಡರು ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು.

ಬಿಜೆಪಿ ಶಾಸಕ ಜಗದೀಶ ಗುಡಗುಂಟಿ ಶಕ್ತಿ ಯೋಜನೆ ಚಾಲನೆ ನೀಡಲು ನಿಲ್ದಾಣಕ್ಕೆ ಬಂದಿದ್ದರು. ಆಗ ಕಾಂಗ್ರೆಸ್ ಮಾಜಿ ಶಾಸಕ ಆನಂದ ನ್ಯಾಮಗೌಡ ಬೆಂಬಲಿಗರೊಂದಿಗೆ ಬಂದರು.

ಕಾಂಗ್ರೆಸ್ ಧ್ವಜ ಪ್ರದರ್ಶಿಸಿದ್ದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಕಾಂಗ್ರೆಸ್ ಬೆಂಬಲಿಗರು ಕಾಂಗ್ರೆಸ್ ಗೆ ಜೈ ಎಂದು ಕೂಗಿದರೆ, ಬೆಜೆಪಿ ಬೆಂಬಲಿಗರು ಜೈಶ್ರೀರಾಮ ಎಂದು ಕೂಗಿದರು.

ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಧ್ವಜ ಪ್ರದರ್ಶನ ಮಾಡಿದ್ದಕ್ಕೆ ಅಧಿಕಾರಿಗಳನ್ನು ಬಿಜೆಪಿ ಮುಖಂಡರು ತರಾಟೆಗೆ ತೆಗೆದುಕೊಂಡರು.

ಶಾಸಕ ಜಗದೀಶ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಯೋಜನೆ ಹಸಿರು ಧ್ವಜ ತೋರಿಸಿ ಚಾಲನೆ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.