ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್–ಕಾಂಗ್ರೆಸ್ ನಡುವೆ ಮೈತ್ರಿ ಶೇ 100ರಷ್ಟು ಖಚಿತ. ಮೈತ್ರಿಕೂಟಕ್ಕೆ 18 ಸ್ಥಾನ ಬಂದರೆ ಕರ್ನಾಟಕಕ್ಕೆ ಪ್ರಧಾನಿ ಸ್ಥಾನ ಸಿಗಬಹುದು ಎಂದು ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ನಗರದಲ್ಲಿ ಭಾನುವಾರ ಜೆಡಿಎಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು. ‘ಸಾಲ ಮನ್ನಾ ವಿಚಾರದಲ್ಲಿ ಅಪಪ್ರಚಾರ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯವರು ಹೇಳಿದರೆಂದು ಸಾಲಮನ್ನಾ ಮಾಡಿಲ್ಲ. ಬದಲಿಗೆ ರೈತರನ್ನು ಕೇಳಿ ಮಾಡಿದ್ದಾರೆ. 100 ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸಬಹುದು ಎಂದು ನಂಬಿರುವ ಬಿಜೆಪಿ ರೈತರ ಸಾಲ ಮನ್ನಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಅದಕ್ಕೆ ಸಾಮಾಜಿಕ ಜಾಲ ತಾಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಂಬೈ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ರೈತರೇ ರಾಜ್ಯದಲ್ಲಿ ಹೆಚ್ಚು ಕೃಷಿ ಭೂಮಿ ಹೊಂದಿದ್ದಾರೆ. ಸಾಲ ಮನ್ನಾದ ಉಪಯೋಗ ಅವರಿಗೆ ಹೆಚ್ಚು ದೊರೆಯಲಿದೆ. ಹಾಗಿದ್ದರೂ ಹಳೇ ಮೈಸೂರು ಭಾಗದ ಒಕ್ಕಲಿಗರಿಗೆ ಮಾತ್ರ ಲಾಭ ಆಗಲಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ರೈತರನ್ನು ತಪ್ಪು ದಾರಿಗೆಳೆಯುವವರ ವಿರುದ್ಧ ದೂರು ದಾಖಲಿಸಲೂ ನಿರ್ಧರಿಸಲಾಗಿದೆ’ ಎಂದು ಕೋನರಡ್ಡಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.