ಬಾಗಲಕೋಟೆ: ಧಾರವಾಡದ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿ ವತಿಯಿಂದ ಮೇ 14ರಂದು ಧಾರವಾಡದ ಭಾರತ ಹೈಸ್ಕೂಲ್ನಲ್ಲಿ 16ನೇ ರಾಜ್ಯ ಮಟ್ಟದ ಖಾಸಗಿ ಶಾಲಾ–ಕಾಲೇಜು ಶಿಕ್ಷಕರ ನೇರ ನೇಮಕಾತಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ನಾಗರಾಜ ಎಚ್.ಎನ್ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ, ಪ್ರೌಢ, ಕಾಲೇಜು ಬೋಧನೆಗೆ ಅರ್ಹತೆ ಹೊಂದಿದವರು ಮೇಳದಲ್ಲಿ ಪಾಲ್ಗೊಳ್ಳಬಹುದು. 2 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಹೆಸರು ನೋಂದಾಯಿಸಿಕೊಂಡು, ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ಅಧ್ಯಯನ ಮಾಡಬಹುದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತರಬೇತಿ ನೀಡಲಾಗುತ್ತದೆ. ವಿವರಗಳಿಗೆ ಮೊ.ಸಂಖ್ಯೆ 94800 62375 ಸಂಪರ್ಕಿಸಬಹುದು ಎಂದು ಪ್ರಕಟಣೆ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.