ಬಾಗಲಕೋಟೆ: ಬಾಲಕೋಟೆ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಅಂತಿಮವಾಗಿ 22 ಅಭ್ಯರ್ಥಿಗಳು ಉಳಿದಿದ್ದು, ಇಲ್ಲಿಯವರೆಗಿನ ಚುನಾವಣೆಗಳಿಗೆ ಹೋಲಿಸಿದರೆ, ಇದು ದಾಖಲೆಯ ಸಂಖ್ಯೆಯಾಗಿದೆ.

ಇಲ್ಲಿಯವರೆಗೆ ನಡೆದ 17 ಚುನಾವಣೆಗಳಲ್ಲಿ 2014ರಲ್ಲಿ ಸ್ಪರ್ಧಿಸಿದ್ದ 17 ಅಭ್ಯರ್ಥಿಗಳ ಸಂಖ್ಯೆಯೇ ದಾಖಲೆಯಾಗಿತ್ತು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುವ ಮೂಲಕ ಹಿಂದಿನ ಚುನಾವಣೆಗಳಲ್ಲಿನ ಸ್ಪರ್ಧಿಗಳ ಸಂಖ್ಯೆಯ ದಾಖಲೆಯನ್ನು ಮುರಿದಿದ್ದಾರೆ.

1952 ರಿಂದ 1962ರವರೆಗೆ ನಡೆದ ಮೂರು ಚುನಾವಣೆಗಳಲ್ಲಿ ಇಬ್ಬರೇ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 1967ರ ಚುನಾವಣೆಯಲ್ಲಿ ಅವರ ಸಂಖ್ಯೆ ಮೂರಕ್ಕೆ ಏರಿತ್ತು. ಸ್ವಾತಂತ್ರ್ಯ ಹೋರಾಟ ಆರಂಭದ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಒಲವು ತೋರುತ್ತಿಲ್ಲ. ಒಮ್ಮತದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿತ್ತು.

1989ರವರೆಗಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದರು. ಪಕ್ಷೇತರರಾಗಿ ಸ್ಪರ್ಧಿಸಲು ಯಾರೂ ಮುಂದಾಗುತ್ತಿರಲಿಲ್ಲ. 1991ರಲ್ಲಿ ನಡೆದ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಹನ್ನೊಂದು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದರು.

1996ರಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದರೆ, 1998 ಹಾಗೂ 99ರಲ್ಲಿ ಒಂದರ ಹಿಂದೆ ಒಂದರಂತೆ ಚುನಾವಣೆ ನಡೆದಿದ್ದರಿಂದ ಎರಡೂ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ಐದನ್ನೂ ದಾಟಿರಲಿಲ್ಲ.

2009ರ ಚುನಾವಣೆಯಲ್ಲಿ 13 ಮಂದಿ ಇದ್ದರೆ, 2019ರಲ್ಲಿ ನಡೆದ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಬಾರಿ 22 ಅಭ್ಯರ್ಥಿಗಳಿದ್ದಾರೆ.

ಎರಡು ಮತಯಂತ್ರಗಳು ಬೇಕು: 16ಕ್ಕಿಂತ ಹೆಚ್ಚಿನ ಅಭ್ಯರ್ಥಿಗಳಿದ್ದರೆ ಎರಡು ಮತಗಳು ಬೇಕಾಗುತ್ತವೆ. ಜೊತೆಗೆ ಕೊನೆಯಲ್ಲಿ ನೋಟಾವೂ ಇರುತ್ತದೆ. ಒಂದು ಮತಯಂತ್ರದಲ್ಲಿ 16 ಅಭ್ಯರ್ಥಿಗಳ ಹೆಸರು ಮಾತ್ರ ಸೇರಿಸಬಹುದಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಎರಡು ಮತಯಂತ್ರಗಳು ಬೇಕಾಗುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.