ಬಾಗಲಕೋಟೆ: ‘ಮುಖ್ಯಮಂತ್ರಿ ಆಗಲು ಕಾಯಬೇಕಾಗುತ್ತದೆ. ಸಮಯ ಕೂಡಿ ಬಂದಾಗ ಮಾತ್ರ ಸಾಧ್ಯ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತು ನಿರ್ಣಯ ಕೈಗೊಳ್ಳಲು ಪಕ್ಷ, ಶಾಸಕರಿದ್ದಾರೆ. ಪಕ್ಷದ ತೀರ್ಮಾನ ಬಹಳ ಮುಖ್ಯ’ ಎಂದರು.

‘ನನಗೆ ಯಾವುದೇ ರೀತಿಯ ಅಸಮಾಧಾನ ಆಗಿಲ್ಲ. ಪಕ್ಷದೊಳಗೆ ಯಾರಿಗಾದರೂ ಅಸಮಾಧಾನವಿದ್ದರೆ ಮಾತುಕತೆ ಮೂಲಕ ಬಗೆಹರಿಸಲಾಗುವುದು’ ಎಂದು ಹೇಳಿದರು.

ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆಯೇ ಎಂಬ ಪ್ರಶ್ನೆಗೆ, ‘ಅವರೇ ಈ ಬಗ್ಗೆ ಈಗಾಗಲೇ ಹೇಳಿದ್ದಾರಲ್ಲ. ಕಾದು ನೋಡೋಣ’ ಎಂದರು.

ನಿಮ್ಮನ್ನು ಮಹಾರಾಷ್ಟ್ರದ ಅಜಿತ್ ಪವಾರ್‌ಗೆ ಹೋಲಿಸಲಾಗುತ್ತಿದೆಯೆಲ್ಲ ಎಂಬ ಪ್ರಶ್ನೆಗೆ, ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಮಹಾರಾಷ್ಟ್ರದ ಸ್ಥಿತಿ ಇಲ್ಲಿ ಬರಲ್ಲ’ ಎಂದರು.
.ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.