ಬಾಗಲಕೋಟೆ: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳ ಮಾರಾಟದ ವಿರುದ್ಧ ಇಲ್ಲಿನ ಜಿಲ್ಲಾಡಳಿತ ಸಮರವನ್ನೇ ಸಾರಿದೆ.

ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಗುಳೇದಗುಡ್ಡ, ರಬಕವಿ ಸೇರಿದಂತೆ ವಿವಿಧೆಡೆ ಬುಧವಾರ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳನ್ನು ಅಲ್ಲಿನ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಗುಳೇದಗುಡ್ಡದಲ್ಲಿ 74 ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲ ದಿನಗಳ ಹಿಂದೆ ಜಮಖಂಡಿ ತಾಲ್ಲೂಕು ಸಾವಳಗಿಯಲ್ಲಿ ಅಲ್ಲಿನ ತಹಶೀಲ್ದಾರ್ ಪ್ರಶಾಂತ ಚನಗೊಂಡ ದಾಳಿ ನಡೆಸಿ 600ಕ್ಕೂ ಹೆಚ್ಚು ಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.

ಜಿಲ್ಲಾಡಳಿತದ ಆದೇಶ: ಜಿಲ್ಲಾಧಿಕಾರಿ ಕೆ.ಜಿ.ಶಾಂತರಾಮ್ ಆದೇಶ ಹೊರಡಿಸಿದ್ದು, ಕೆರೆ, ಬಾವಿ, ನದಿ, ಹಳ್ಳ ಸೇರಿದಂತೆಜಿಲ್ಲೆಯ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮಾಡಿದ ವಿಗ್ರಹಗಳನ್ನು ವಿಸರ್ಜಿಸುವಂತಿಲ್ಲ ಎಂದು ಹೇಳಿದ್ದಾರೆ. ಆದೇಶ ಉಲ್ಲಂಘಿಸಿದಲ್ಲಿ ₹10 ಸಾವಿರ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.