ಬಾದಾಮಿ (ಬಾಗಲಕೋಟೆ ಜಿಲ್ಲೆ): ಗೋಹತ್ಯೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ, ಬಜರಂಗ ದಳ ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಗುರುವಾರ ಅಂಗಡಿಗಳನ್ನು ಬಂದ್ ಮಾಡಿಸಿ, ರಸ್ತೆ ತಡೆ ನಡೆಸಿದರು. ವೀರಪುಲಿಕೇಶಿ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

‘ಗೋಹತ್ಯೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದನ್ನು ಉಲ್ಲಂಘಿಸಿ ಪಟ್ಟಣದ ಹೊರವಲಯದ ತೋಟದಲ್ಲಿ 15ಕ್ಕೂ ಅಧಿಕ ಗೋವುಗಳನ್ನು ಹತ್ಯೆ ಮಾಡಲಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗೋವುಗಳನ್ನು ಹತ್ಯೆ ಮಾಡಿದ ಮತ್ತು ಚೀಲಗಳಲ್ಲಿ ತುಂಬಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಟ್ಟಣದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಗೋಹತ್ಯೆ ಮಾಡಿದವರನ್ನು ಬಂಧಿಸಬೇಕು ಹಾಗೂ ಅವುಗಳ ಹತ್ಯೆ ತಡೆಯುವಲ್ಲಿ ವಿಫಲರಾದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ ಕುಮಾರಸ್ವಮಿ ಹಿರೇಮಠ ಆಗ್ರಹಿಸಿದ್ದಾರೆ.

‘ಗೋಹತ್ಯೆಗೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಜಯಪ್ರಕಾಶ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.