ಗುಳೆದಗುಡ್ಡ: ಬ್ರಿಟಿಷರ ವಿರುದ್ಧ ತೊಡೆತಟ್ಟಿ, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿ, ಸ್ವಾಭಿಮಾನದ ಪ್ರತೀಕವಾದವರು ನಾಡಿನ ಹಲಗಲಿ ಬೇಡರಾಗಿದ್ದಾರೆ ಎಂದು ಸಾಹಿತಿ ಸಿ.ಎಂ. ಜೋಶಿ ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಾಲಕರ ಸರ್ಕಾರಿ ಪ್ರೌಢ ಶಾಲೆ ಇವರ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಜನಪದ ಸಂಗ್ರಹ, ಹಲಗಲಿ ಬೇಡರು’ ವಿಷಯ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಪಾಯಿ ದಂಗೆ ಇತಿಹಾಸ ಪುಟಗಳಲ್ಲಿ ದಾಖಲಾಗಿರುವ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚು ಹೊತ್ತಿದ್ದ ವೇಳೆಗೆ ಇಂದಿನ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಹಲಗಲಿ ಗ್ರಾಮದ ಬೇಡರು ಬ್ರಿಟಿಷರ ನಿದ್ದೆಗೆಡಿಸಿದ ವೀರ ಕನ್ನಡಿಗರು. ಬ್ರಿಟಿಷರು ಜಾರಿಗೆ ತಂದಿದ್ದ ನಿಶಸ್ತ್ರೀಕರಣ ಕಾನೂನಿನ ವಿರುದ್ಧ ಸೆಡ್ಡು ಹೊಡೆದು ನಿಂತ ಕನ್ನಡ ನೆಲೆದ ಹಲಗಲಿ ಬೇಡರು ಸ್ಮರಣೀಯರು ಎಂದರು.

ಸರ್ಕಾರಿ ಬಾಲಕರ ಪ್ರೌಢಶಾಲೆ ಉಪಪ್ರಾಚಾರ್ಯ ಮಲ್ಲಿಕಾರ್ಜುನ ಮಾಗಿ ಮಾತನಾಡಿದರು. ತಾಲ್ಲೂಕು ಕಸಾಪ ಅಧ್ಯಕ್ಷ ಡಾ.ಎಚ್.ಎಸ್.ಘಂಟಿ ಸ್ವಾಗತಿಸಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಪಾಗಿ, ಕಸಾಪ ಗೌರವ ಕಾರ್ಯದರ್ಶಿ ಯಲ್ಲಪ್ಪ ಮನ್ನಿಕಟ್ಟಿ, ಎ.ಐ. ಅಪಘಾನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.