ಬಾಗಲಕೋಟೆ: ಜಮಖಂಡಿಯ ರಾಯಲ್ ಪ್ಯಾಲೇಸ್ ಕಾಲೇಜು ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಿಯಾಂಕ ಮೇತ್ರಿ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಮಂಗಳವಾರ ತಡರಾತ್ರಿ ಪ್ರಿಯಾಂಕ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾಲೇಜಿನ ಆಡಳಿತ ಮಂಡಳಿ ಹೇಳಿದೆ. ಆದರೆ ಪ್ರಿಯಾಂಕ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಿಯಾಂಕ ರಾಯಲ್ ಪ್ಯಾಲೇಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಕಾಲೇಜು ಹಾಗೂ ಹಾಸ್ಟೆಲ್ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಒಡೆತನದಲ್ಲಿವೆ.

ಪ್ರಿಯಾಂಕಾ ಮೂಲತಃ ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿ.

ಹಾಸ್ಟೆಲ್ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜಮಖಂಡಿ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.