ರಬಕವಿ ಬನಹಟ್ಟಿ: 2024-25ನೇ ಸಾಲಿನ ಆಸ್ತಿ ಕರ ತುಂಬಲು ರಬಕವಿ ಬನಹಟ್ಟಿ ನಗರಸಭೆಗೆ ಸಾರ್ವಜನಿಕರು ದೌಡಾಯಿಸುತ್ತಿದ್ದಾರೆ. ಆದರೆ ಶುಕ್ರವಾರದಿಂದ ಸರ್ವರ್ ಸಮಸ್ಯೆಯಾಗಿದ್ದು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಏಪ್ರಿಲ್ ತಿಂಗಳಲ್ಲಿ ಆಸ್ತಿ ಕರ ಪವಾತಿಸಿದರೆ ಶೇ5 ರಷ್ಟು ರಿಯಾಯಿತಿ ದೊರೆಯಲಿದ್ದು, ಆದರೆ ಸರ್ವರ್ ಸಮಸ್ಯೆಯಿಂದಾಗಿ ಬಹಳಷ್ಟು ಜನರು ಆಸ್ತಿ ಕರ ತುಂಬದೆ ಪರದಾಡುತ್ತಿದ್ದಾರೆ.

ರಬಕವಿ, ಬನಹಟ್ಟಿ ರಾಮಪುರ ಮತ್ತು ಹೊಸೂರಿನ ಜನರು ದಿನನಿತ್ಯ ನಗರಸಭೆಗೆ ಬಿಸಿಲಿನಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿಸಿಲು ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸರ್ವರ್ ಸಮಸ್ಯೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಕಂಡುಕೊಂಡು ಆಸ್ತಿ ಕರ ಪಾವತಿಸಲು ಅನುಕೂಲ ಮಾಡಿಕೊಡಲಾಗುವುದು.
–ಜಗದೀಶ ಈಟಿ, ಪೌರಾಯುಕ್ತರು ನಗರಸಭೆ ರಬಕವಿ ಬನಹಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.