ಮಹಾಲಿಂಗಪುರ: ಸಮೀಪದ ಢವಳೇಶ್ವರ ಗ್ರಾಮದಲ್ಲಿ ಘಟಪ್ರಭಾ ನದಿ ನೀರು ನುಗ್ಗಿದ್ದು ಸಂತ್ರಸ್ತರ ಸ್ಥಳಾಂತರಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶನಿವಾರ ನೆರವಾದರು.

ಘಟಪ್ರಭಾ ನದಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನದಿ ತೀರದಲ್ಲಿರುವ ಢವಳೇಶ್ವರ ಗ್ರಾಮದ ನಾಲ್ಕು ಕುಟುಂಬದ ಸದಸ್ಯರನ್ನು ಸರ್ಕಾರ ವಸತಿ ಕಲ್ಪಿಸಿರುವ ಆಶ್ರಯ ಪ್ಲಾಟ್ಗೆ ಸ್ಥಳಾಂತರ ಮಾಡಲಾಯಿತು.

ಗ್ರಾಮದ ಢವಳನಾಥ ಅನುದಾನಿತ ಪ್ರಾಥಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ 47 ವಿದ್ಯಾರ್ಥಿಗಳು ಈ ಕುಟುಂಬಗಳ ಸ್ಥಳಾಂತರಕ್ಕೆ ನೆರವಾಗುವ ಮೂಲಕ ಮಾನವೀಯತೆ ಮೆರೆದರು. ದಿನಬಳಕೆ ವಸ್ತುಗಳು ಹಾಗೂ ಸಾಮಗ್ರಿಗಳನ್ನು ವಾಹನದಲ್ಲಿ ತುಂಬಿದರು.

ಮನೆ ಹಾಗೂ ಸುತ್ತಲೂ ನೀರು ನಿಲ್ಲುವುದರಿಂದ ಉಂಟಾಗುವ ಸಾಂಕ್ರಾಮಿಕ ರೋಗಗಳ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಪ್ರಶಂಸನಾ ಪತ್ರವನ್ನು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.