ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಶುಕ್ರವಾರ ಜಿಲ್ಲೆಯ ಬರ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.

ಬೆಳಿಗ್ಗೆ 9.15ರಿಂದ ಮಧ್ಯಾಹ್ನ 1.30ರವರೆಗೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಬರಗಾಲ ಪೀಡಿತ ಪ್ರದೇಶಗಳಿಗೆ, ಮಧ್ಯಾಹ್ನ 2.30ರಿಂದ ಸಂಜೆ 6ರವರೆಗೆ ಜಮಖಂಡಿ ತಾಲ್ಲೂಕಿನ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರ ಅಹವಾಲು ಆಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಗರಸಭೆ: 18ಕ್ಕೆ ಜನತಾ ದರ್ಶನ

ಬಾಗಲಕೋಟೆ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ನ.18 ರಂದು ಬೆಳಿಗ್ಗೆ 10.30ಕ್ಕೆ ನಗರಸಭೆಯ ನೂತನ ಸಭಾಭವನದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ಬಡಾವಣೆಗಳಲ್ಲಿನ ಸಮಸ್ಯೆಗಳ ಕುರಿತ ಅಹವಾಲು ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.20ಕ್ಕೆ ಜಿಲ್ಲೆಗೆ ಸಚಿವ ಎಚ್.ಕೆ. ಪಾಟೀಲ

ಬಾಗಲಕೋಟೆ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ನ.20ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 8.30ಕ್ಕೆ ಮಹಾಕೂಟಕ್ಕೆ ಭೇಟಿ ನೀಡಲಿದ್ದು, ಮಹಾಕೂಟೇಶ್ವರನ ದರ್ಶನ ಪಡೆಯಲಿದ್ದಾರೆ. ಬೆಳಿಗ್ಗೆ 9.30ರಿಂದ ಐಹೊಳೆಯ ಸ್ಮಾರಕಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 4ಕ್ಕೆ ಇತಿಹಾಸಕಾರರು ಹಾಗೂ ತಜ್ಞರ ಜತೆಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 6ಕ್ಕೆ ಬನಶಂಕರಿ ದೇವಿ ದರ್ಶನ ಪಡೆಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.