ಬಳ್ಳಾರಿ: ‘ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಲೋಕ ಅದಾಲತ್ ನಡೆಸಲಾಗುತ್ತಿದೆ. ಹೀಗಾಗಿ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ್ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಂಟಿಯಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಜನತಾ ನ್ಯಾಯಾಲಯದಲ್ಲಿ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ
ಪಡಿಸಿಕೊಳ್ಳಬಹುದು. ರಾಷ್ಟ್ರೀಯ ಅದಾಲತ್‍ನಲ್ಲಿ ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳಿಗೆ ಉಚಿತವಾಗಿ ವಕೀಲರನ್ನು ನೇಮಿಸಲಾಗುವುದು’ ಎಂದರು.

‘ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ವ್ಯಾಜ್ಯಪೂರ್ವ ಪ್ರಕರಣಗಳಾದ ವಿದ್ಯುತ್, ನೀರಿನ ಶುಲ್ಕ ಸೇರಿ ಇತರೆ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗ್ಗೆಹರಿಸಿಕೊಳ್ಳಬಹುದು. ನ್ಯಾಯಾಲಯದಲ್ಲಿ ಉಭಯ ಕಕ್ಷಿದಾರರಿಗೆ ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು ಎಂದರು.

‘ಬಳ್ಳಾರಿ ಜಿಲ್ಲೆಯಲ್ಲಿ 135 ಬ್ಯಾಂಕ್ ರಿಕವರಿ, 578 ವಿದ್ಯುತ್, 31 ನೀರಿನ ವ್ಯಾಜ್ಯ ಪ್ರಕರಣಗಳು ಇತ್ಯರ್ಥವಾಗಿದ್ದು, 878 ಪ್ರಕರಣಗಳು ಬಾಕಿ ಉಳಿದಿವೆ. ಪ್ರತಿ ಎರಡು ತಿಂಗಳಿಗೊಮ್ಮೆ ಎರಡನೇ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುತ್ತದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿ ಅರಿವು ಕಾರ್ಯಕ್ರಮ ಮೂಡಿಸಲಾಗುವುದು' ಎಂದರು. ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಸಂಧಾನದ ಮೂಲಕ 5 ಪ್ರಕರಣಗಳನ್ನು ಪರಿಶೀಲಿಸಿ ಇತ್ಯರ್ಥ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.