ಬಳ್ಳಾರಿ: ‘ಸಂಡೂರು ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯವು ನವೆಂಬರ್ 23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ನ.23 ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆೆ. ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್-4 ಮತ ಎಣಿಕೆ ಕಾರ್ಯ ನಡೆಯಲಿದೆ’ ಎಂದು ತಿಳಿಸಿದರು.

‘ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ’ ಎಂದರು.

‘19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

‘ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿವೆ. ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ತಿಳಿಸಲು ಮಾಧ್ಯಮ ಕೇಂದ್ರ ತೆರೆಯಲಾಗುವುದು’ ಎಂದರು.

‘ಮತ ಎಣಿಕೆ ಕೇಂದ್ರದ 100 ಮೀಟರ್ ಪ್ರದೇಶದಲ್ಲಿ ವಾಹನಗಳ ನಿರ್ಬಂಧಿಸಲಾಗಿದೆ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ’ ಎಂದರು.

ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್ಪಿಎಫ್, ಸಿಎಎಸ್ಎಫ್, ಕೆಎಸ್ಆರ್ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ರಾಜೇಶ್.ಎಚ್.ಡಿ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.