ಬಳ್ಳಾರಿ: ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೋಲ್ಡ್ ಸ್ಟೋರೇಜ್ನಲ್ಲಿ ಶನಿವಾರ ರಾತ್ರಿ ಆಕಸ್ಮಿಕವಾಗಿ ಅಗ್ನಿ ಅವಘಡ ಜರುಗಿದೆ. ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಒಣಮೆಣಸಿನಕಾಯಿ ಘಾಟು ಆವರಿಸಿದೆ.

ಚೆನೈ ಮೂಲದ ಜಯಂತಿ ಇಂಡಿಯನ್ ಪ್ರಾಡಕ್ಟ್ಸ್ ಕಂಪನಿಗೆ ಸೇರಿದ ಕೋಲ್ಡ್ ಸ್ಟೋರೇಜ್ ಇದಾಗಿದೆ. ರೈತರು 40 ಸಾವಿರಕ್ಕೂ ಅಧಿಕ ಒಣಮೆಣಸಿನಕಾಯಿ ಚೀಲವನ್ನು ಇಲ್ಲಿ ಸಂಗ್ರಹಿದ್ದರು. ಅಗ್ನಿ ಅನಾಹುತದಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಮಾಹಿತಿ ತಿಳಿದ ಅಗ್ನಿ ಶಾಮಕ ಸಿಬ್ಬಂದಿ 5 ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಆದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ.

ಕಳೆದ ಬಾರಿ ಇದೇ ಪ್ರದೇಶದಲ್ಲಿ ಮೂರು ಘಟಕಗಳಲ್ಲಿ ಬೆಂಕಿ ಅವಘಡ ಜರುಗಿ ನಷ್ಟ ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.