ಬಳ್ಳಾರಿ : ಕಾಂಗ್ರೆಸ್ಸಿನವರು ದಲಿತರನ್ನು ಕೇವಲ ವೋಟ್ ಬ್ಯಾಂಕಿಗಾಗಿ ಬಳಸಿಕೊಂಡಿದೆ ವಿನಃ ಅವರ ಅಭಿವೃದ್ಧಿಗೆ ಮುಂದಾಗಿಲ್ಲ ಎಂದು ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ನಲ್ಲೇಚೆರವು ಪ್ರದೇಶದಲ್ಲಿರುವ ವಾಲ್ಮೀಕಿ ಭವನದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಸೋಮವಾರ ಅವರು ಮಾತನಾಡಿದರು.ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದತ್ತು.

ಡಾ.ಬಿ.ಆರ್ ಅಂಬೇಡ್ಕರ್ ನಿಧನ ಹೊಂದಿದ ಸಂದರ್ಭದಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಶವ ಸಂಸ್ಕಾರ ಮಾಡಲು ಮೂರು ಅಡಿ ಜಾಗ ನೀಡಲಿಲ್ಲ. ಆದೇ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ನಿಧನ ಹೊಂದಿದಾಗ ನೂರಾರು ಎಕರೆ ಜಾಗ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಬಳ್ಳಾರಿ ನಗರ ಶಾಸಕ ಆದ ನಂತರ ಎಸ್ಸಿ, ಎಸ್ಟಿ ಜನಾಂಗದವರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಸತಿ ಸಚಿವ ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಪ್ರಯತ್ನದ ಫಲವಾಗಿ ಇಂದು ಬಡವರಿಗೆ ಹಕ್ಕುಪತ್ರ ನೀಡಿದ್ದೇನೆ. ಬಳ್ಳಾರಿ ನಗರದಲ್ಲಿ 12 ಸಾವಿರ ಮನೆಗಳ ಹಕ್ಕುಪತ್ರ ನೀಡಿದ್ದೇನೆ. ಕಾಂಗ್ರೆಸ್'ನವರು ಕೇವಲ ತಮ್ಮ ಭಾವಚಿತ್ರವಿರುವ ಪತ್ರ ನೀಡಿ ಕೈತೊಳಿದುಕೊಂಡಿದ್ದರು ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಪರಿಶಿಷ್ಟ ವರ್ಗಗಳಿಗೆ ಅನೇಕ ಯೋಜನೆಗಳು ಜಾರಿ ಮಾಡಿದೆ. ಸ್ಟಾರ್ಟ್ ಆಫ್ ಮೂಲಕ ಉದ್ಯೋಗ ಸೃಷ್ಟಿ ಮಾಡುತ್ತಿದೆ. ಪರಿಶಿಷ್ಟರಿಗಾಗಿ ವಿಶೇಷ ಸಹಾಯಧನ ನೀಡಿ ದಲಿತರ ಕಲ್ಯಾಣಕ್ಕೆ ಮುಂದಾಗಿದೆ.

ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಿಜೆಪಿ ಶ್ರಮಿಸಲಿದೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಆರ್ಶೀವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.