ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಪವರ್ ಕಾಲುವೆಯ ಎಸ್ಕೇಪ್ ಗೇಟ್‌ನಿಂದ ಸೀತಾರಾಮ್ ತಾಂಡಾ, ಗುಂಡಲಕೇರಿಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಸೇನೆಯ ಪದಾಧಿಕಾರಿಗಳು ಈ ಸಂಬಂಧ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಸೂಪರಿಟೆಂಡೆಂಟ್ ಎಂಜಿನಿಯರ್ ಕೆ.ವಿ. ರಮಣ ಅವರಿಗೆ ಶುಕ್ರವಾರ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದರು.

‘ಪವರ್ ಕಾಲುವೆ ನವೀಕರಣ ಮಾಡಿದಾಗ ಹಳೆಯ ಕಬ್ಬಿಣದ ಅಲಗುಗಳನ್ನು ತೆಗೆದು ಹೊಸದಾಗಿ ಅಳವಡಿಸಿದ ನಂತರ ನೀರು ಹರಿಯುತ್ತಿಲ್ಲ. ಇದರಿಂದ ಜನ, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ನೀರು ಹರಿಸಲು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ. ಗೌಡ, ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ತಾಲ್ಲೂಕು ಸಂಚಾಲಕ ಉದ್ದಾನಯ್ಯ, ಮುಖಂಡರಾದ ಮಲ್ಲಿಕಾರ್ಜುನ, ಸಂಗಪ್ಪ, ಚಿನ್ನದೊರೆ, ಎಲ್.ಎಸ್. ರುದ್ರಪ್ಪ, ಕೆ. ಸುರೇಶ್, ಜೆ. ನಾಗೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.