ಹೊಸಪೇಟೆ (ವಿಜಯನಗರ): 2018–19ನೇ ಸಾಲಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ 36 ತಿಂಗಳ ಮಾಸಿಕ ಸಹಾಯ ಧನ ಬಿಡುಗಡೆಗೊಳಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಆಗ್ರಹಿಸಿದೆ.

ಈ ಸಂಬಂಧ ಶುಕ್ರವಾರ ಎಸ್‌ಎಫ್‌ಐ ರಾಜ್ಯ ಘಟಕದ ಉಪಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ಸಹ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ್ ಅವರು ಕುಲಪತಿ ಪ್ರೊ. ಸ.ಚಿ. ರಮೇಶ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಆನ್‌ಲೈನ್ ಮೂಲಕ ಸಹಾಯ ಧನ ನೀಡಬೇಕು. ಸಹಾಯ ಧನ ₹25,000ಕ್ಕೆ ಹೆಚ್ಚಿಸಬೇಕು. ಸಾವಿತ್ರಿಬಾಯಿ ಫುಲೆ ವಸತಿ ನಿಲಯ ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸಬೇಕು. ಬಾಂಡ್ ಪದ್ಧತಿ ಕೈಬಿಡಬೇಕು. ಫೆಲೋಶಿಪ್ ನೀಡಬೇಕು. ಲ್ಯಾಪ್‌ಟಾಪ್ ಕೊಡಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.