ಹೊಸಪೇಟೆ: ತಾಲ್ಲೂಕಿನ ಬಿಳಿಕಲ್ಲು ಸಂರಕ್ಷಿತ ಅರಣ್ಯ ಪ್ರದೇಶದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಗುರುವಾರ ಸಂಜೆ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು.

₨8 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಘಟಕವನ್ನು ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ. ರವಿ ಉದ್ಘಾಟಿಸಿದರು. ಬಳಿಕ ಮಾತನಾಡಿ, ‘ಉದ್ಯಾನಕ್ಕೆ ಭೇಟಿ ಕೊಡುವ ಪ್ರವಾಸಿಗರ ಅನುಕೂಲಕ್ಕಾಗಿ ಘಟಕ ನಿರ್ಮಿಸಿರುವುದು ಒಳ್ಳೆಯ ಕೆಲಸ. ಹಂತ ಹಂತವಾಗಿ ಉದ್ಯಾನದಲ್ಲಿ ಪ್ರವಾಸಿಗರಿಗಾಗಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ಬಳಿಕ ಜಿಂಕೆ ಉದ್ಯಾನ, ಕರಡಿ ಸಫಾರಿ, ಹುಲಿ ಸಫಾರಿ, ಸಿಂಹ ಸಫಾರಿಗೆ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿ, ಮಾಹಿತಿ ಪಡೆದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪುರುಷೋತ್ತಮ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಾಂಬಶಿವಪ್ಪ, ವಲಯ ಅರಣ್ಯ ಅಧಿಕಾರಿ ರಮೇಶ, ಉಪ ವಲಯ ಅರಣ್ಯ ಅಧಿಕಾರಿ ಪರಮೇಶ್ವರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.