ಹೊಸಪೇಟೆ: ನಗರ ಹೊರವಲಯದ ಜೋಳದರಾಶಿ ಗುಡ್ಡಕ್ಕೆ ಶುಕ್ರವಾರ ರಾತ್ರಿ ಬೆಂಕಿ ಬಿದ್ದಿದೆ.

ಗುಡ್ಡದ ಮೇಲ್ಭಾಗದಲ್ಲಿ ಬೆಂಕಿ ಹೊತ್ತುಕೊಂಡು ಧಗಧಗನೆ ಉರಿದಿದೆ. ವಿಷಯ ಗೊತ್ತಾಗುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕೆಲಸ ಮಾಡಿದರು.

‘ಬೆಂಕಿ ಹೊತ್ತಿಕೊಂಡಿರುವುದಕ್ಕೆ ನಿಖರ ಕಾರಣವೇನು ತಿಳಿದು ಬಂದಿಲ್ಲ. ಕಳೆದ ಕೆಲವು ದಿನಗಳಿಂದ 40ರಿಂದ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ಇದೆ. ಸುಡು ಬಿಸಿಲಿನಿಂದ ಗುಡ್ಡದ ಮೇಲಿನ ಮರ, ಗಿಡಗಳು ಒಣಗಿ ಹೋಗಿವೆ. ಗಾಳಿ ಬೀಸಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.